ಸೋಮವಾರ, ಮೇ 23, 2022
30 °C

ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಳ್ಳಾರಿ: ‘ಪಕ್ಷ ಸಂಘಟನೆ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಯುವ ಕಾಂಗ್ರೆಸ್ ಸದಸ್ಯತ್ವ ಅಭಿಯಾನ ಏರ್ಪಡಿಸಲಾಗಿದ್ದು, ಜಿಲ್ಲೆಯಾದ್ಯಂತ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ’ ಎಂದು ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಶ್ರವಣ ಕುಮಾರ ನಾಯಕ್ ಪತ್ರಿಕಾಗೋಷ್ಠಿಯಲ್ಲಿ  ತಿಳಿಸಿದರು.  ‘ಬೂತ್, ವಿಧಾನ ಸಭೆ, ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಸದಸ್ಯತ್ವ ಅಭಿಯಾನ ಆರಂಭಗೊಂಡಿದೆ. ಯುವಕರು ಸಕ್ರಿಯ ರಾಜಕಾರಣದಲ್ಲಿ ತೊಡಗ ಬೇಕು ಎಂಬ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್‌ಗಾಂಧಿ ಆಶಯದಂತೆ ಈ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದರು.ದೇಶದ 16 ಜಿಲ್ಲೆಗಳಲ್ಲಿ ಈಗಾಗಲೇ ಸದಸ್ಯತ್ವ ಅಭಿಯಾನ ಪೂರ್ಣಗೊಂಡಿದ್ದು, ಉಳಿದ ರಾಜ್ಯಗಳ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಸದಸ್ಯತ್ವ ಪೂರ್ಣಗೊಂಡ ರಾಜ್ಯಗಳಲ್ಲಿ ಪಕ್ಷದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಜಿಲ್ಲೆಯಲ್ಲೂ ಸದಸ್ಯತ್ವ ಅಭಿಯಾನ ಪೂರ್ಣಗೊಂಡ ನಂತರ ಯುವ ಕಾಂಗ್ರೆಸ್‌ನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುವುದು ಎಂದು ತಿಳಿಸಿದರು.ಮಾ. 25ರ ವರಿಗೆ ಸದಸ್ಯತ್ವ ಅಭಿಯಾನ ನಡೆಯಲಿದೆ. ಸಾಮಾನ್ಯ ವರ್ಗಕ್ಕೆ ರೂ. 15, ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಮಹಿಳೆಯರಿಗೆ ರೂ. 5  ಸದಸ್ಯತ್ವ ಶುಲ್ಕ ನಿಗದಿಪಡಿಸಲಾಗಿದೆ ಎಂದರು.‘ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆ ಉತ್ತಮವಾಗಿದೆ. ಇದೀಗ ಪಕ್ಷದ ಅಧ್ಯಕ್ಷರಾದ ಎಂ.ಪಿ.ರವೀಂದ್ರ ಉತ್ಸಾಹಿ ಯುವಕರಾಗಿದ್ದು, ಪಕ್ಷವನ್ನು ಮತ್ತಷ್ಟು ಪ್ರಬಲಗೊಳಿಸುವ ಕಾರ್ಯ ಮಾಡಲಿದ್ದಾರೆ’ ಎಂದರು.‘ರಾಜ್ಯದಲ್ಲಿ ವಿದ್ಯಾರ್ಥಿ ಕಾಂಗ್ರೆಸ್ ಸಂಘಟನೆ ಶಕ್ತಿ ಕುಗ್ಗಿದೆ. ಈ ಬಗ್ಗೆ ರಾಷ್ಟ್ರೀಯ ನಾಯಕರ ಜತೆ ಚರ್ಚಿಸಿ, ಕಾಂಗ್ರೆಸ್‌ನ ವಿದ್ಯಾರ್ಥಿ ಸಂಘಟನೆಯನ್ನು  ಚುರುಕುಗೊಳಿಸುವ ಹಾಗೂ ವಿದ್ಯಾರ್ಥಿ ಸಮುದಾಯದ ಮದ್ಯೆ ಕಾಂಗ್ರೆಸ್‌ನ ಸಿದ್ಧಾಂತ ಹಾಗೂ ದೇಶಪ್ರೇಮ ಮೂಡಿಸುವ ಕಾರ್ಯ ಏರ್ಪಡಿಸಲಾಗುವುದು’ ಎಂದರು.ಯುವ ಕಾಂಗ್ರೆಸ್ ಮುಖಂಡ ಬೆಣಕಲ್ ಬಸವರಾಜ ಗೌಡ, ಬಿ. ರಾಂ ಪ್ರಸಾದ್, ಹುಮಾಯೂನ್ ಖಾನ್, ಮಂಜುನಾಥ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.ಕೂಡ್ಲಿಗಿ ವರದಿ

ತಾಲ್ಲೂಕಿನಲ್ಲಿ ಯುವ ಕಾಂಗ್ರೆಸ್ ಅಭಿಯಾನಕ್ಕೆ ಶನಿವಾರ ಪಟ್ಟಣದ ಜನ್ನು ಫಾರಂ ಹೌಸ್‌ನಲ್ಲಿ ಚಾಲನೆ ನೀಡಲಾಯಿತು. ಬಳ್ಳಾರಿ ಜಿಲ್ಲೆಯ ಯುವ ಕಾಂಗ್ರೆಸ್ ಕೋ ಆರ್ಡಿನೇಟರ್ ಹಕೀಮ ಹುಸೇನ್ ಅಭಿಯಾನಕ್ಕೆ ಚಾಲನೆ ನೀಡಿದರು.ತಾಲ್ಲೂಕಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ನೋಂದಣಿಗೆ ಕಾರ್ಯನಿರ್ವಹಿಸಬೇಕು, ಪಕ್ಷವನ್ನು ಬಲವಾಗಿ ಸಂಘಟಿಸಬೇಕು ಎಂದು ತಿಳಿಸಿದರು. ಪಕ್ಷದಲ್ಲಿ ಪ್ರಾಥಮಿಕ ಮಟ್ಟದಿಂದಲೇ ಯುವಕರನ್ನು ಸಂಘಟಿಸಿ, ಸದಸ್ಯತ್ವ ನೋಂದಣಿ ಮಾಡಿಸಬೇಕು, ಬ್ಲಾಕ್ ಅಧ್ಯಕ್ಷರನ್ನು ಚುನಾವಣೆ ಮೂಲಕವೇ ಆಯ್ಕೆ ಮಾಡಬೇಕು ಎಂದರು. 18ರಿಂದ 35 ವರ್ಷದೊಳಗಿನ ಯುವಕರ ಸದಸ್ಯರಾಗಬಹುದಾಗಿದೆ ಎಂದು ತಿಳಿಸಿದರು.ಯುವ ಕಾಂಗ್ರೆಸ್‌ನ ಎಂ. ವಿವೇಕ್, ಹಬೀಬ್, ಗೋಪಿ, ನಾಗರಾಜ್, ರಾಘವೇಂದ್ರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉದಯ ಜನ್ನು, ಹೊಸಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ. ಶಶಿಧರ್, ಎನ್. ವೆಂಕಟೇಶ್, ಸೋಮಪ್ಪ ನಾಯಕ್, ಎನ್.ಟಿ. ತಮ್ಮಣ್ಣ, ಜಯರಾಂ ನಾಯಕ್, ಡಿಸಿಸಿ ಸದಸ್ಯ ಎಚ್. ವೀರಭದ್ರಪ್ಪ, ಕಾವಲ್ಲಿ ಶಿವಪ್ಪನಾಯಕ್, ಶಫಿವುಲ್ಲ, ಮರಿಯಪ್ಪ, ಮರುಳಸಿದ್ದಪ್ಪ ಉಪಸ್ಥಿತರಿದ್ದರು.ಸಿರುಗುಪ್ಪ

ಕಾಂಗ್ರೆಸ್ ಪಕ್ಷದಲ್ಲಿ ಯುವಕರ ಸಂಘಟನೆಗೋಸ್ಕರ ಯುವ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಆರಂಭಿಸಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಮಹ್ಮದ್ ನೂರುಲ್ಲಾ ಹೇಳಿದರು.ಅವರು ಪಟ್ಟಣದಲ್ಲಿ ತಾಲ್ಲೂಕು ಕಾಂಗ್ರೆಸ್ ಪಕ್ಷ ಶುಕ್ರವಾರದಿಂದ ಆರಂಭಿಸಿದ ಯುವ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಕೊಪ್ಪಳ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ತಾಲ್ಲೂಕಿನಲ್ಲಿ 175 ಬೂತಗಳನ್ನು ಮಾಡಲಾಗಿದೆ ಎಂದರು.ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದೀಪಕ್‌ಸಿಂಗ್ ಈ ಉಸ್ತುವಾರಿ ವಹಿಸಿಕೊಂಡಿದ್ದು, ನೋಂದಣಿಗಾಗಿ ಕಾರ್ಯಕರ್ತರಿಗೆ ತರಬೇತಿ ನೀಡಲಾಗಿದೆ ಎಂದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಂ. ನಾಗರಾಜ, ಪುರಸಭೆ ಸದಸ್ಯ ಕೆ.ವೆಂಕಟರಾಮರೆಡ್ಡಿ, ಆರೀಫ್‌ವುಲ್ಲಾ, ಸಿಕಂದರ್ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.