ಕಾಂಗ್ರೆಸ್ ಸಿಬಿಐ ಅನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ: ರಾಜನಾಥ್

ಶನಿವಾರ, ಜೂಲೈ 20, 2019
22 °C

ಕಾಂಗ್ರೆಸ್ ಸಿಬಿಐ ಅನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ: ರಾಜನಾಥ್

Published:
Updated:

ಗೌಹಾಟಿ (ಪಿಟಿಐ): ಇಶ್ರತ್ ಜಹಾನ್ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ವಾಕ್ಸಮರ ಮುಂದುವರೆದಿದೆ.ಕಾಂಗ್ರೆಸ್ ಪಕ್ಷ ಸಿಬಿಐ ಅನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್‌ಸಿಂಗ್ ಆರೋಪಿಸಿದರು. ಸರ್ಕಾರ ಕೂಡಲೇ ಇಶ್ರತ್ ಮತ್ತು ಭಯೋತ್ಪಾದಕರಿಗೂ ಇದ್ದ ನಂಟನ್ನು ಬಹಿರಂಗಪಡಿಸಬೇಕು ಎಂದು ಅವರು ಆಗ್ರಹಿಸಿದರು.ಸಿಬಿಐ ತನಿಖೆಯು ರಾಜಕೀಯ ದುರುದ್ದೇಶದಿಂದ ಕೂಡಿದೆ. ಕಾಂಗ್ರೆಸ್ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಸಿಂಗ್ ಟೀಕಿಸಿದರು. ದೇಶದಲ್ಲಿ 2003ರವರೆಗೂ ಸುಮಾರು 3000 ಎನ್‌ಕೌಂಟರ್‌ಗಳು ನಡೆದಿವೆ ಆದರೆ ಕೇಂದ್ರ ಸರ್ಕಾರ ಉದ್ದೇಶ ಪೂರ್ವಕವಾಗಿ ಗುಜರಾತ್‌ನಲ್ಲಿ ನಡೆದ ಎನ್‌ಕೌಂಟರ್‌ಗಳನ್ನು ಮಾತ್ರ ಸಿಬಿಐ ತನಿಖೆಗೆ ಒಳಪಡಿಸಿರುವುದರ ಹಿಂದೆ ರಾಜಕೀಯ ದುರುದ್ದೇಶ ಇರುವುದು ಸ್ಪಷ್ಟವಾಗಿ ಗೋಚರಿಸುತ್ತದೆ ಎಂದರು.ಈ ಪ್ರಕರಣದಲ್ಲಿ ಗುಜರಾತ್ ಸರ್ಕಾರದ ತಪ್ಪಿಲ್ಲ ಎಂದು ರಾಜನಾಥ್ ಸಿಂಗ್ ಸಮರ್ಥಿಸಿಕೊಂಡರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry