ಬುಧವಾರ, ನವೆಂಬರ್ 13, 2019
17 °C

ಕಾಂಗ್ರೆಸ್ ಸೇರಿದ ಜೀಜಾ, ಸುಂದರ

Published:
Updated:

ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿ ಜೀಜಾ ಹರಿಸಿಂಗ್, ನಿವೃತ್ತ ಐಎಫ್‌ಎಸ್ ಅಧಿಕಾರಿ ಡಾ.ಕೆ.ಸುಂದರ ನಾಯ್ಕ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿದ್ದ ಸಿ.ಆರ್.ಮನೋಹರ್, ವೀರಶೈವ ಮಹಾಸಭಾ ಉಪಾಧ್ಯಕ್ಷ ಸಚ್ಚಿದಾನಂದ ಮೂರ್ತಿ ಮತ್ತಿತರರು ಸೋಮವಾರ ಕಾಂಗ್ರೆಸ್ ಪಕ್ಷ ಸೇರಿದರು.ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ಎಂ.ವೀರಪ್ಪ ಮೊಯಿಲಿ ಅವರು ಎಲ್ಲರನ್ನೂ ಪಕ್ಷಕ್ಕೆ ಬರಮಾಡಿಕೊಂಡರು. ಕಾಂಗ್ರೆಸ್ ಪಕ್ಷದ ಧ್ಯೇಯ, ಸಿದ್ಧಾಂತ ಮತ್ತು ಆದರ್ಶಗಳಿಗೆ ಮನಸೋತು ಪಕ್ಷ ಸೇರುತ್ತಿರುವುದಾಗಿ ನಾಲ್ವರೂ ಹೇಳಿದರು.

ಪ್ರತಿಕ್ರಿಯಿಸಿ (+)