ಸೋಮವಾರ, ಏಪ್ರಿಲ್ 12, 2021
26 °C

ಕಾಂಗ್ರೆಸ್ ಹಿರಿಯ ನಾಯಕ ಅರ್ಜುನ್ ಸಿಂಗ್ ಇನ್ನಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 ನವದೆಹಲಿ (ಪಿಟಿಐ): 81 ವರ್ಷ ವಯಸ್ಸಿನ ಅರ್ಜುನ್ ಸಿಂಗ್ ಅವರು ಹೃದಯಬೇನೆಯಿಂದ ಬಳಲುತ್ತಿದ್ದರು. ಕೆಲ ದಿನಗಳ ಹಿಂದಷ್ಟೆ ಅವರನ್ನು ಏಮ್ಸ್ ಗೆ ದಾಖಲಿಸಲಾಗಿತ್ತು. ಹೃದಯಾಘಾತಕ್ಕೆ ಒಳಗಾದ ಅವರು ಶುಕ್ರವಾರ ಸಂಜೆ 6-15ಕ್ಕೆ ಕೊನೆಯುಸಿರೆಳೆದರು ಎಂದು ಮೂಲಗಳು ತಿಳಿಸಿವೆ.

ಇವರು ಪತ್ನಿ ಸರೋಜದೇವಿ, ಪುತ್ರರಾದ ಅಜಯ್ ಸಿಂಗ್, ಅಭಿಮನ್ಯು ಹಾಗೂ ಪುತ್ರಿ ವೀಣಾ ಅವರನ್ನು ಅಗಲಿದ್ದಾರೆ. ಅಜಯ್ ಸಿಂಗ್ ಅವರು ಮಧ್ಯಪ್ರದೇಶದ ಶಾಸಕರಾಗಿಯೂ ಆಯ್ಕೆಯಾಗಿದ್ದಾರೆ.

ನೆಹರೂ ಕುಟುಂಬಕ್ಕೆ ಆಪ್ತರಾಗಿದ್ದ ಇವರು ರಾಜೀವ್ ಗಾಂಧಿ ಅವರ ಕಾಲದಲ್ಲಿ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷರಾಗಿದ್ದರು. ಅಲ್ಲದೆ, ಪಂಜಾಬ್ ನಲ್ಲಿನ ಉಗ್ರರ ವಿರುದ್ಧದ ಮಿಲಿಟರಿ ಕಾರ್ಯಾಚರಣೆಯ ಅವಧಿಯಲ್ಲಿ ಇವರು ಅಲ್ಲಿನ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.

ಕಾಕತಾಳೀಯವೆಂಬಂತೆ ನೀತಿ ನಿಯಮಾವಳಿ ರೂಪಿಸುವ ಕಾಂಗ್ರೆಸ್ ನ ಕಾರ್ಯಕಾರಿ ಸಮಿತಿಯಿಂದ ಇವರನ್ನು ಕೈಬಿಡಲಾಗಿತ್ತು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.