ಕಾಂಡಾ ಜಾಮೀನು ಅರ್ಜಿ ವಜಾ

ಭಾನುವಾರ, ಮೇ 19, 2019
32 °C

ಕಾಂಡಾ ಜಾಮೀನು ಅರ್ಜಿ ವಜಾ

Published:
Updated:

 ನವದೆಹಲಿ (ಐಎಎನ್‌ಎಸ್): ಗಗನಸಖಿ ಗೀತಿಕಾ ಶರ್ಮ ಆತ್ಮಹತ್ಯೆ ಪ್ರಕರಣದ ಆರೋಪಿ ತಲೆಮರೆಸಿಕೊಂಡಿರುವ ಹರಿಯಾಣದ ಮಾಜಿ ಸಚಿವ ಗೋಪಾಲ್ ಕಾಂಡಾ ಅವರನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಉಪ ಪೊಲೀಸ್ ಆಯುಕ್ತ ಪಿ.ಕರುಣಾಕರನ್ ಅವರು ಗುರುವಾರ ಮಾಹಿತಿ ನೀಡಿದ್ದಾರೆ.ಈ ಮಧ್ಯೆ ನಿರೀಕ್ಷಣಾ ಜಾಮೀನು ಕೋರಿ ಕಾಂಡಾ ಗುರುವಾರ ದೆಹಲಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು  ವಜಾ ಮಾಡಿದೆ. `ಗೀತಿಕಾ ಶರ್ಮ ಅತ್ಯಂತ ಸೂಕ್ಷ್ಮ ಸ್ವಭಾವದವರಾಗಿದ್ದು, ಪ್ರೀತಿ ಮತ್ತು ದ್ವೇಷದ ಮನೋಭಾವವುಳ್ಳವರಾಗಿದ್ದರು. ಆತ್ಮಹತ್ಯೆಗೆ ಮುನ್ನ ಬರೆದಿರುವ ಪತ್ರದ ಅಂಶಗಳು ಅಸೂಯೆ, ಪ್ರೀತಿ ಮತ್ತು ದ್ವೇಷದ ಮಿತ್ರ ಭಾವನೆಯನ್ನು ತೋರಿಸುತ್ತವೆ~ ಎಂದು ಕಾಂಡಾ ಪರ ವಕೀಲರು  ಜಾಮೀನು ಅರ್ಜಿಯಲ್ಲಿ ತಿಳಿಸಿದ್ದರು.ಕಾಂಡಾ ಅವರ ನಿವಾಸ, ಕಚೇರಿಗಳ ಮೇಲೆ ಪೊಲೀಸರು ಗುರುವಾರವೂ ದಾಳಿ ಮುಂದುವರೆಸಿದ್ದು, ದೆಹಲಿ, ಗುಡಗಾಂವ್, ಫರೀದಾಬಾದ್‌ನಲ್ಲಿರುವ ಆಸ್ತಿಗಳ ಮೇಲೆ ದಾಳಿ ನಡೆಸಿದ್ದಾರೆ. ಅಲ್ಲದೆ ಗುಡಗಾಂವ್‌ನ ಪಾರ್ಕ್ ಫ್ಲಾಜ ಹೋಟೆಲ್ ಮೇಲೂ ದಾಳಿ ನಡೆಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಒಟ್ಟು 35 ಪೊಲೀಸರ ಮೂರು ತಂಡಗಳು ಕಾಂಡಾ ಪತ್ತೆಗೆ ಕಾರ್ಯಾಚರಣೆ ನಡೆಸಿವೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry