ಕಾಂಡಾ ಮನೆ, ಕಚೇರಿ ಶೋಧ

ಗುರುವಾರ , ಮೇ 23, 2019
24 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ಕಾಂಡಾ ಮನೆ, ಕಚೇರಿ ಶೋಧ

Published:
Updated:

ಗುಡಗಾಂವ್ (ಐಎಎನ್‌ಎಸ್): ಮಾಜಿ ಗಗನಸಖಿ ಗೀತಿಕಾ ಆತ್ಮಹತ್ಯೆ ಪ್ರಕರಣದ ಆರೋಪಿ, ಹರಿಯಾಣದ ಮಾಜಿ ಸಚಿವ ಗೋಪಾಲ್ ಗೋಯಲ್ ಕಾಂಡಾ ಅವರ ಮನೆ ಹಾಗೂ ಕಚೇರಿಯಲ್ಲಿ ಭಾನುವಾರ ಶೋಧ ನಡೆಸಿದ ದೆಹಲಿ ಪೊಲೀಸರು ಎಲೆಕ್ಟ್ರಾನಿಕ್ ವಸ್ತುಗಳು ಮತ್ತು ಕಡತಗಳನ್ನು ವಶಪಡಿಸಿಕೊಂಡಿದ್ದಾರೆ.`ಕಾಂಡಾ ಸಮ್ಮುಖದಲ್ಲಿಯೇ ಎಂಡಿಎಲ್‌ಆರ್ ಸಮೂಹದ ಕಚೆರಿಯಲ್ಲಿ ಮೂರು ತಾಸುಗಳ ಕಾಲ ಶೋಧ ನಡೆಸಲಾಯಿತು~ ಎಂದು ಪೊಲೀಸ್ ತಂಡದ ಸದಸ್ಯರೊಬ್ಬರು ತಿಳಿಸಿದ್ದಾರೆ.`ಕಂಪ್ಯೂಟರ್, ಸರ್ವರ್, ಹಾರ್ಡ್ ಡಿಸ್ಕ್‌ಗಳು ಹಾಗೂ ಮೂರು ಕಡತಗಳನ್ನು ವಶಕ್ಕೆ ಪಡೆಯಲಾಗಿದೆ. ಶೋಧ ನಡೆಸಿದಾಗ ಹಾಸಿಗೆ ಹೊದಿಕೆಯಲ್ಲಿ ಸುತ್ತಿಟ್ಟಿದ್ದ ಕೆಲವೊಂದು ವಸ್ತುಗಳು ಪತ್ತೆಯಾಗಿವೆ. ನಂತರದಲ್ಲಿ ಕಾಂಡಾ ಅವರನ್ನು ಅವರ ಮನೆಗೆ ಕರೆದುಕೊಂಡು ಹೋಗಿ ಅಲ್ಲಿ ಅರ್ಧ ಗಂಟೆ ಶೋಧ ನಡೆಸಿದೆವು. ಈ ಸಂದರ್ಭದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಅವರ ಸಂಬಂಧಿಕರು ಹಾಗೂ ಕುಟುಂಬದ ಸದಸ್ಯರು ಇದ್ದರು~ ಎಂದು ಅವರು ಹೇಳಿದ್ದಾರೆ. ಕಾಂಡಾ ಅವರನ್ನು ಶನಿವಾರ ಬಂಧಿಸಲಾಗಿದೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry