ಸೋಮವಾರ, ಮಾರ್ಚ್ 1, 2021
31 °C

ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆ: ಲೋಕಸಭೆಯಲ್ಲಿ ನಿರ್ಣಯ ಅಂಗೀಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆ: ಲೋಕಸಭೆಯಲ್ಲಿ ನಿರ್ಣಯ ಅಂಗೀಕಾರ

ನವದೆಹಲಿ(ಪಿಟಿಐ): ಹಿಂಸಾಚಾರದಿಂದ ಪ್ರಕ್ಷುಬ್ಧವಾಗಿರುವ ಕಾಶ್ಮೀರ ರಾಜ್ಯದಲ್ಲಿ ತಕ್ಷಣ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಮರುಸ್ಥಾಪನೆಗೆ ಲೋಕಸಭೆಯಲ್ಲಿ ಶುಕ್ರವಾರ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಲಾಯಿತು.ಸ್ಪೀಕರ್‌ ಸುಮಿತ್ರಾ ಮಹಾಜನ್‌ ಅವರು ನಿರ್ಣಯವನ್ನು ಓದಿ, ಜಮ್ಮು ಕಾಶ್ಮೀರದಲ್ಲಿ ಭದ್ರತೆ ಒದಗಿಸಿ, ಶಾಂತಿ ಮರುಸ್ಥಾಪಿಸುವ ಮೂಲಕ ಅಲ್ಲಿನ ಜನರಲ್ಲಿ ಹಾಗೂ ಅದರಲ್ಲೂ ಯುವ ಸಮೂಹದಲ್ಲಿ ಭವರಸೆ ಮೂಡಿಸಬೇಕಿದೆ ಎಂದು ಸದನಕ್ಕೆ ಮನವಿ ಮಾಡಿದರು. ಕಾಶ್ಮೀರದಲ್ಲಿ ಪ್ರತಿಭಟನೆ, ಹಿಂಸಾಚಾರದಿಂದಾಗಿ ಸಂಭವಿಸಿರುವ ಸಾವು ಹಾಗೂ ನೋವಿಗೆ ಮಹಾಜನ್‌ ಅವರು ವಿಷಾದ ವ್ಯಕ್ತಪಡಿಸಿದರು.ಮಹಾಜನ್‌ ಅವರು ನಿರ್ಣಯವನ್ನು ಓದುತ್ತಿದ್ದಂತೆ, ಸದಸ್ಯರು ಮೇಜು ಕುಟ್ಟಿ ಸರ್ವಾನುಮತದ ಬೆಂಬಲ ವ್ಯಕ್ತಪಡಿಸಿದರು. ರಾಷ್ಟ್ರದ ಏಕತೆ, ಸೌಹಾರ್ದ ಹಾಗೂ ಭದ್ರತೆ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂದು ಒಕ್ಕೊರಲಿನ ಅಭಿಪ್ರಾಯ ವ್ಯಕ್ತಪಡಿಸಿದರು.ನಿರ್ಣಯ ಕುರಿತು ಗೃಹ ಸಚಿವ ರಾಜನಾಥ ಸಿಂಗ್‌ ಅವರ ಬದಲಿಗೆ ಸ್ಪೀಕರ್‌ ಸುಮಿತ್ರಾ ಮಹಾಜನ್‌ ಅವರು ನಿರ್ಣಯ ಪತ್ರಿಯನ್ನು ಓದಬೇಕು ಎಂದು ವಿರೋಧ ಪಕ್ಷಗಳು ಸಲಹೆ ನೀಡಿದ್ದರಿಂದ ಸ್ಪೀಕರ್‌ ನಿರ್ಣಯವನ್ನು ಓದಿದರು.ಇದಕ್ಕೂ ಮೊದಲು ಮಾತನಾಡಿದ ಲೋಕಸಭೆ ವಿಪಕ್ಷ ನಾಯಕ ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ ಅವರು, ಕಾಶ್ಮೀರದಲ್ಲಿ ಪರಿಸ್ಥಿತಿ ಅತ್ಯಂತ ಸಂಕೀರ್ಣವಾಗಿದೆ. ಆದ್ದರಿಂದ, ನಿರ್ಣಯ ಅಂಗೀಕರಿಸಬೇಕು ಎಂದು ಸದನಕ್ಕೆ ಒತ್ತಾಯಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.