ಶುಕ್ರವಾರ, ಸೆಪ್ಟೆಂಬರ್ 20, 2019
22 °C

ಕಾಗೋಡು ತಿಮ್ಮಪ್ಪ ಅಸ್ವಸ್ಥ

Published:
Updated:

ಸಾಗರ: ರಕ್ತದೊತ್ತಡ ಹಾಗೂ ಮಧುಮೇಹ ಸಮಸ್ಯೆಯಿಂದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಬಹಿರಂಗ ಸಭೆಯಲ್ಲೇ ನಿತ್ರಾಣಗೊಂಡು ಆಸ್ಪತ್ರೆ ಸೇರಿದ ಘಟನೆ ಬುಧವಾರ ನಡೆದಿದೆ.ತಾಲ್ಲೂಕಿನ ಆನಂದಪುರಂನಲ್ಲಿ ಕಾಗೋಡು ತಿಮ್ಮಪ್ಪ ಅಭಿಮಾನಿ ಬಳಗ ಕಾಗೋಡು ಅವರಿಗೆ 80 ವರ್ಷ ತುಂಬಿದ ಹಿನ್ನೆಲೆಯಲ್ಲಿ ಅಭಿನಂದನಾ ಸಮಾರಂಭ ಏರ್ಪಡಿಸಿತ್ತು.ಂತವೀರಪ್ಪಗೌಡ ಮಾತು ಮುಗಿಸುತ್ತಿದ್ದಂತೆ ವೇದಿಕೆಯಲ್ಲಿ ಕುಳಿತ ಜಾಗದಲ್ಲೇ ಕಾಗೋಡು ತೀವ್ರವಾಗಿ ಬಳಲಿದಂತೆ ಕಂಡುಬಂತು. ತಕ್ಷಣ ಅವರನ್ನು ಆನಂದಪುರಂನ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು. ನಂತರ ಶಿವಮೊಗ್ಗದ ಆಸ್ಪತ್ರೆಗೆ  ದಾಖಲಿಸಲಾಯಿತು. ಅವರುಚೇತರಿಸಿಕೊಂಡಿದ್ದಾರೆ.

Post Comments (+)