ಗುಂಡ್ಲುಪೇಟೆ: ತಾಲ್ಲೂಕಿನ ಬೇಗೂರು ಸಮೀಪದ ಬೆಳಚಲವಾಡಿ ಗ್ರಾಮದ ಬಳಿ ಇರುವ ಜಮೀನುಗಳಿಗೆ ಶುಕ್ರವಾರ ರಾತ್ರಿ ಕಾಡಾನೆಗಳ ಹಿಂಡು ದಾಳಿ ನಡೆಸಿ ಲಕ್ಷಾಂತರ ಮೌಲ್ಯದ ವಿವಿಧ ಬೆಳೆಗಳನ್ನು ನಾಶಪಡಿಸಿವೆ.

ಬೆಳಚಲವಾಡಿ ಗ್ರಾಮದ ರೈತ ಗೌಡಿಕೆ ಬಿ.ಕೆ.ಲಿಂಗಣ್ಣ ಎಂಬುವರ ಜಮೀನಿನಲ್ಲಿ ಬೆಳೆದಿದ್ದ ಮುಸುಕಿನ ಜೋಳ, ಹಾಗೂ ಇನ್ನಿತರ ರೈತರ ಜಮೀನುಗಳಲ್ಲಿ ಬೆಳೆಲಾಗಿದ್ದ ಕಬ್ಬು, ಬಾಳೆ ಹಾಗೂ ಇತರೆ ಬೆಳೆಗಳನ್ನು ಕಾಡಾನೆಗಳ ಗುಂಪು ನಾಶಮಾಡಿವೆ. ಇದರಿಂದ ರೈತರ ಕೈಸೇರುವ ಹಂತದಲ್ಲಿದ್ದ ಅಪಾರ ಪ್ರಮಾಣದ ಬೆಳೆ ಸಂಪೂರ್ಣ ನಾಶವಾಗಿದೆ.

ಈ ಪ್ರದೇಶ ಓಂಕಾರ ಅರಣ್ಯ ಪ್ರದೇಶದ ವ್ಯಾಪ್ತಿಗೆ ಬರುತ್ತದೆ. ಇಲ್ಲಿ ಸೋಲಾರ್ ವಿದ್ಯುತ್ ಬೇಲಿ ಅಳವಡಿಸಲಾಗಿದೆ. ಆದರೂ ಆನೆಗಳ ಹಾವಳಿ ನಿಯಂತ್ರಣಕ್ಕೆ ಬಂದಿಲ್ಲ. ಈ ಭಾಗದಲ್ಲಿ ಬಿಸಿಲು ಹೆಚ್ಚಾಗುತ್ತಿದ್ದು, ಬಾಯಾರಿದ ಆನೆಗಳ ಹಿಂಡು ನೀರಿಗಾಗಿ ಸಮೀಪದ ಹೊಸಪುರ ಹಾಗೂ ಸುತ್ತಮುತ್ತಲ ಗ್ರಾಮಗಳ ಕೆರೆಗೆ ಬರುತ್ತಿವೆ. ಹೀಗೆ ಬಂದಾಗ ದಾರಿಯಲ್ಲಿ ಸಿಕ್ಕ ಜಮೀನುಗಳ ಬೆಳೆ ನಾಶ ಪಡಿಸುತ್ತವೆ ಎಂಬುದು ರೈತರು ಆಕ್ರೋಶ.

ಓಂಕಾರ ಅರಣ್ಯ ಪ್ರದೇಶದ ವ್ಯಾಪ್ತಿ ಯಲ್ಲಿ ಕಾಡುಮೃಗಗಳ ಉಪಟಳ ಹೆಚ್ಚಾಗಿದ್ದರೂ, ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ. ಕಾಡಾನೆಗಳ ಹಾವಳಿ ವಿಪರೀತವಾಗುತ್ತಿದೆ. ಕೂಡಲೇ ಅರಣ್ಯ ಇಲಾಖೆ ದಿನಗೂಲಿ ನೌಕರರನ್ನು ನೇಮಿಸಿಕೊಂಡು ಈ ಪ್ರದೇಶದಲ್ಲಿ ರಾತ್ರಿ ಗಸ್ತು ತಿರುಗು ವ್ಯವಸ್ಥೆ ಕಲ್ಪಿಸಬೇಕು. ರೈತರಿಗೆ ಉಚಿತ ಪಟಾಕಿಗಳನ್ನು ಓಂಕಾರ ಅರಣ್ಯ ಇಲಾಖೆ ಕಚೇರಿಯಲ್ಲಿ ನೀಡಬೇಕು ಎಂದು ಹಲವು ರೈತರು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.