ಸೋಮವಾರ, ಮೇ 25, 2020
27 °C

ಕಾಡಾನೆ ದಾಳಿ; ಬಾಳೆ, ಟೊಮೆಟೊ ನಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಂಡ್ಲುಪೇಟೆ: ತಾಲ್ಲೂಕಿನ ಬೇಗೂರು ಸಮೀಪದ ಹೊಸಪುರ ಗ್ರಾಮದಲ್ಲಿ ಗುರುವಾರ ರಾತ್ರಿ ಕಾಡಾನೆಗಳ ಹಿಂಡು ದಾಳಿ ನಡೆಸಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆಗಳು ನಾಶವಾಗಿವೆ. ಹೊಸಪುರ ಗ್ರಾಮದ ಶಿವಣ್ಣೇ ಗೌಡ ಹಾಗೂ ಸುತ್ತಮುತ್ತಲಿನ ಜಮೀನುಗಳಿಗೆ ಗುರುವಾರ ರಾತ್ರಿ ಕಾಡಾನೆಗಳ ಹಿಂಡು ದಾಳಿ ನಡೆಸಿ ಜಮೀನಿನಲ್ಲಿ ಬೆಳೆದಿದ್ದ ಟೊಮಾಟೊ ಹಾಗೂ ಬಾಳೆ ಬೆಳೆಯನ್ನು ನಾಶ ಪಡಿಸಿದ್ದು ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಇದೇ ಗ್ರಾಮದ ಮಹದೇವಪ್ಪ ಎಂಬುವವರ ಜಮೀನಿಗೂ ನುಗ್ಗಿ ಅಲ್ಲಿ ಬೆಳೆದಿದ್ದ ಕಬ್ಬಿನ ಬೆಳೆಯನ್ನು ಸಹ ತಿಂದು ಹಾಕಿವೆ.ಕಾಡಂಚಿನ ಗ್ರಾಮದ ಸುತ್ತಲೂ ಸೋಲಾರ್ ವಿದ್ಯುತ್ ಬೇಲಿ ಅಳವಡಿಸಿದ್ದರೂ ಇತ್ತೀಚೆಗೆ ಕಾಡಾನೆಗಳು ನಿರಂತರವಾಗಿ ದಾಳಿ ನಡೆಸಿ ರೈತರು ಬೆಳೆದಿರುವ ಬೆಳೆ ನಾಶಪಡಿಸುತ್ತಿರುವುದು ರೈತರಲ್ಲಿ ಆತಂಕ ಮೂಡಿಸಿದೆ. ಅರಣ್ಯ ಇಲಾಖೆ ಇತ್ತ ಗಮನಹರಿಸ ಬೇಕು ಮತ್ತು ಕಾಡುಮೃಗಗಳ ಉಪಟಳ ತಪ್ಪಿಸಿ ನಷ್ಟವಾಗಿರುವ ಬೆಳೆಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.