ಶುಕ್ರವಾರ, ಮೇ 14, 2021
35 °C

ಕಾಡಾನೆ ದಾಳಿ: ವ್ಯಕ್ತಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜರಾಜೇಶ್ವರಿನಗರ: ಕಾಡಾನೆ ದಾಳಿಗೆ ಸಿಲುಕಿದ ವ್ಯಕ್ತಿಯೊಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಕಂಬೀಪುರದಲ್ಲಿ ನಡೆದಿದೆ.ಶನಿವಾರ ರಾತ್ರಿ ಕೆಲಸ ಮುಗಿಸಿಮನೆಗೆ ತೆರಳುತ್ತಿದ್ದ ಅರುಣ್‌ಕುಮಾರ್ (42) ಎಂಬುವರ ಮೇಲೆ ಆನೆ ದಾಳಿ ನಡೆಸಿದ ಪರಿಣಾಮ ಎರಡು ಕಾಲು ಮತ್ತು ಕೈಗಳಿಗೆ ಪೆಟ್ಟಾಗಿವೆ.

ಅರುಣ್‌ಕುಮಾರ್ ಚಿಕಿತ್ಸೆ ಪಡೆಯುತ್ತಿದ್ದಾರೆ.ಇತ್ತೀಚೆಗೆ ಗೋಣಿಪುರದ  ವೆಂಕಟೇಶ್ ಎಂಬುವರು ಕಾಡಾನೆ ದಾಳಿಯಿಂದ ಮೃತಪಟ್ಟಿದ್ದರು. ಕಾಡಿನಿಂದ ನಾಡಿಗೆ ಆನೆಗಳು ದಾಳಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಜನರಿಗೆ ರಾತ್ರಿ ವೇಳೆಯಲ್ಲಿ ರಕ್ಷಣೆ ನೀಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.ಈ ನಡುವೆ ಸಾರ್ವಜನಿಕರು ಪ್ರತಿಭಟನೆ ನಡೆಸಿ, ಅರುಣ್‌ಕುಮಾರ್‌ಗೆ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.