ಶುಕ್ರವಾರ, ಮೇ 14, 2021
29 °C

ಕಾಡುಪ್ರಾಣಿ ಹಾವಳಿ: ಕ್ರಮಕ್ಕೆ ಮಹದೇವು ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ತಾಲ್ಲೂಕಿನ ಗಡಿ ಭಾಗದ ರೈತರು ಕಾಡುಪ್ರಾಣಿಗಳ ಹಾವಳಿಯಿಂದ ಬೇಸತ್ತಿದ್ದು, ಬೆಳೆ ನಷ್ಟ ಅನುಭವಿಸುತ್ತಿದ್ದಾರೆ. ಕೂಡಲೇ, ಸೌರ ವಿದ್ಯುತ್ ಬೇಲಿ ಅಳವಡಿಸುವ ಮೂಲಕ ವನ್ಯಜೀವಿಗಳ ಕಾಟ ತಪ್ಪಿಸಲು ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಎಂ. ಮಹದೇವು ಒತ್ತಾಯಿಸಿದರು.ತಾಲ್ಲೂಕಿನ ಹರದನಹಳ್ಳಿ ಹೋಬಳಿಯ ವಿವಿಧ ಗ್ರಾಮಗಳಿಗೆ ಇತ್ತೀಚೆಗೆ ಬರ ಅಧ್ಯಯನ ಸಂಬಂಧ ಭೇಟಿ ನೀಡಿ ರೈತರ ಅಹವಾಲು ಆಲಿಸಿದ ಬಳಿಕ ಅವರು ಮಾತನಾಡಿದರು. ಕಾಡಂಚಿನಲ್ಲಿ ಆನೆ ಕಂದಕ ನಿರ್ಮಿಸಬೇಕು. ಸೌರ ವಿದ್ಯುತ್ ಬೇಲಿ ಅಳವಡಿಸಿ ಸಮರ್ಪಕವಾಗಿ ನಿರ್ವಹಣೆ ಮಾಡಿದರೆ ಕಾಡಾನೆಗಳ ದಾಳಿ ಹತೋಟಿಗೆ ಬರಲಿದೆ.

 

ಈ ನಿಟ್ಟಿನಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಕ್ರಮಕೈಗೊಳ್ಳಬೇಕು. ರೈತರ ಬೆಳೆ ನಷ್ಟವಾಗಿರುವ ಬಗ್ಗೆ ಪರಿಶೀಲಿಸಿ ಸೂಕ್ತ ಪರಿಹಾರ ನೀಡಲು ಜಿಲ್ಲಾಡಳಿತ ಮುಂದಾಗಬೇಕು ಎಂದು ಆಗ್ರಹಿಸಿದರು.

`ಬರ ಪರಿಸ್ಥಿತಿಯಲ್ಲೂ ಕೃಷಿ ಪಂಪ್‌ಸೆಟ್ ಹೊಂದಿರುವ ರೈತರು ಬೆಳೆ ಬೆಳೆದಿದ್ದಾರೆ.

 

ಆದರೆ, ನಿರಂತರವಾಗಿ ಕಾಡಾನೆಗಳು ದಾಳಿ ಇಡುತ್ತಿವೆ. ಇದರಿಂದ ಉತ್ಪಾದನಾ ವೆಚ್ಚವೂ ಸಿಗದೆ ಕಂಗಾಲಾಗಿದ್ದೇವೆ. ಬೆಳೆ ಪರಿಹಾರವೂ ಸಿಗುತ್ತಿಲ್ಲ~ ಎಂದು ಅನ್ನದಾತರು ಅಳಲು ತೋಡಿಕೊಂಡರು.

ಇದಕ್ಕೆ ಪ್ರತಿಕ್ರಿಯಿಸಿದ ಮಹದೇವು, ಜಿಲ್ಲೆಯಲ್ಲಿ ಭೀಕರ ಬರಗಾಲ ಕಾಣಿಸಿಕೊಂಡಿದೆ.

 

ಜನ, ಜಾನುವಾರು ತೊಂದರೆಗೆ ಸಿಲುಕಿದ್ದಾರೆ. ಜತೆಗೆ, ಅರಣ್ಯದ ಅಂಚಿನಲ್ಲಿರುವ ರೈತರು ಕಾಡುಪ್ರಾಣಿಗಳ ದಾಳಿಯಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ಶಾಶ್ವತವಾಗಿ ಪರಿಹಾರ ಕಲ್ಪಿಸುವ ಕುರಿತು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದರು.ವಿ.ಸಿ. ಹೊಸೂರು, ವೆಂಕಟಯ್ಯನಛತ್ರ, ಮೂಡಲಹೊಸಹಳ್ಳಿ, ಅರಕಲವಾಡಿ, ಲಿಂಗನಪುರ, ಯಾನಗಳ್ಳಿ, ಉಡಿಗಾಲ, ತಮ್ಮಡಹಳ್ಳಿ ಸೇರಿದಂತೆ ಕಾಡಂಚಿನ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ. ಪಂಚಾಕ್ಷರಿ,  ಪ್ರಧಾನ ಕಾರ್ಯದರ್ಶಿ ಸಿ. ವೀರೇಶ್, ತಾಲ್ಲೂಕು ಘಟಕದ ಅಧ್ಯಕ್ಷ ಮಂಗಲ ಶಿವಕುಮಾರ್, ಶಿವಸ್ವಾಮಿ, ಜಿ.ಪಂ. ಮಾಜಿ ಉಪಾಧ್ಯಕ್ಷ ಶಿವಮೂರ್ತಿ, ನಗರಸಭೆ ಸದಸ್ಯರಾದ ಸುದರ್ಶನ ಗೌಡ, ಕೆ. ನಾಗರಾಜು, ಮುಖಂಡರಾದ ರಾಮಚಂದ್ರು, ಗುರುಮೂರ್ತಿ, ಪೊನ್ನಾಚಿ ಮಹದೇವಸ್ವಾಮಿ ಇತರರು ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.