`ಕಾನೂನು ತಿಳಿವಳಿಕೆಯಿಂದ ಸಮಾನತೆ'

7

`ಕಾನೂನು ತಿಳಿವಳಿಕೆಯಿಂದ ಸಮಾನತೆ'

Published:
Updated:

ಸೋಮವಾರಪೇಟೆ: ಪ್ರತಿಯೊಬ್ಬ ಮಹಿಳೆ ಕಾನೂನು ತಿಳಿದುಕೊಂಡರೆ ಸಮಾಜದಲ್ಲಿ ಸಮಾನತೆ ಸಾಧ್ಯ ಎಂದು ಸಿವಿಲ್ ನ್ಯಾಯಾಧೀಶ ಸಿ.ಎಸ್. ಜಿತೇಂದ್ರನಾಥ್ ಅಭಿಪ್ರಾಯಪಟ್ಟರು.



ತಾಲ್ಲೂಕು ಕಾನೂನು ಸೇವಾ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಕಾನೂನು ಸೇವಾ ದಿನಾಚರಣೆಯ ಅಂಗವಾಗಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸ್ತ್ರೀಶಕ್ತಿ ಸಂಘದ ಸದಸ್ಯರಿಗೆ ಗುರುವಾರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಯೋಜಿಸಿದ್ದ `ಕಾನೂನು ಅರಿವು' ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.



ಗ್ರಾಮೀಣ ಭಾಗದಲ್ಲಿ ಕಾನೂನಿನ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಡಿಸಲು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸ್ತ್ರೀ ಶಕ್ತಿ ಸಂಘಗಳ ಮಹಿಳೆಯರಿಂದ ಮಾತ್ರ ಸಾಧ್ಯ ಎಂದರು.



ವಕೀಲರ ಸಂಘದ ಅಧ್ಯಕ್ಷ ಎನ್.ಸಿ. ಚನ್ನಬಸವಯ್ಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅಪರ ಸಿವಿಲ್ ನ್ಯಾಯಾಧೀಶ ಬಿ.ವರದರಾಜ್ ಮತ್ತಿತರರು ಪಾಲ್ಗೊಂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry