ಶುಕ್ರವಾರ, ಏಪ್ರಿಲ್ 23, 2021
28 °C

ಕಾನೂನು ಸಾಕ್ಷರತಾ ರಥಕ್ಕೆ ಬಾಳಪ್ಪ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಗರಿಬೊಮ್ಮನಹಳ್ಳಿ: ಪ್ರತಿಯೊಬ್ಬರೂ ಕಾನೂನಿನ ಜ್ಞಾನ ಹೊಂದಿರಬೇಕು. ಕಾನೂನಿನ ಅರಿವಿಲ್ಲದ ಪರಿಣಾಮವಾಗಿ ಗ್ರಾಮೀಣ ಪ್ರದೇಶಗಳ ಜನತೆ ಸಮರ್ಪಕ ನ್ಯಾಯದಿಂದ ವಂಚಿತ ರಾಗುತ್ತಿದ್ದಾರೆ. ಅನವಶ್ಯಕ ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ ಎಂದು ಸಿವಿಲ್ ನ್ಯಾಯಾಧೀಶರು ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಯ ಗೌರವಾನ್ವಿತ ಸದಸ್ಯ ಕಾರ್ಯದರ್ಶಿ ಬಾಳಪ್ಪ ಅಪ್ಪಣ್ಣ ಜರಗು ಖೇದ ವ್ಯಕ್ತಪಡಿಸಿದರು.ಪಟ್ಟಣದ ನ್ಯಾಯಾಲಯದ ಆವರಣದ ಬಳಿ ಗುರುವಾರ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ಕಾನೂನು ಸೇವಾ ಸಮಿತಿ, ತಾಲ್ಲೂಕು ವಕೀಲರ ಸಂಘ ಹಾಗೂ ವಿವಿಧ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಕಾನೂನು ಸಾಕ್ಷರತಾ ರಥಕ್ಕೆ ಚಾಲನೆ ನೀಡಿ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.      ಗ್ರಾಮೀಣ ಪ್ರದೇಶಗಳ ಜನತೆಗೆ ಕಾನೂನಿನ ಅರಿವು ಹೆಚ್ಚಿಸುವುದರ ಜೊತೆಗೆ ಸಮರ್ಪಕ ನ್ಯಾಯ ಪಡೆಯುವ ನಿಟ್ಟಿನಲ್ಲಿ ಕಾನೂನು ಸೇವಾ ಸಮಿತಿಯಿಂದ ದೊರೆಯಬಹುದಾದ ನೆರವು ಕುರಿತು ಪೂರಕ ಮಾಹಿತಿ ನೀಡುವ ಹಿನ್ನೆಲೆಯಲ್ಲಿ ಕಾನೂನು ಸಾಕ್ಷರಥಾ ರಥಕ್ಕೆ ಚಾಲನೆ ನೀಡ ಲಾಗಿದೆ. ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಲು ಸೂಚಿಸಿದರು.ಬಡ ಕಕ್ಷಿದಾರರು ವಕೀಲರ ಶುಲ್ಕ ಸೇರಿದಂತೆ ನ್ಯಾಯಾಲಯದ ಶುಲ್ಕ ಭರಿಸಬೇಕಾಗಿಲ್ಲ ಮತ್ತು ರಾಜೀ ಸಂಧಾನಗಳ ಮೂಲಕ ವ್ಯಾಜ್ಯಗಳು ಇತ್ಯರ್ಥವಾಗುವುದರಿಂದ ವೃಥಾ ನ್ಯಾಯಾಲಯಕ್ಕೆ ನಡೆಸುವ ಅಲೆದಾಟ ತಪ್ಪುತ್ತದೆ. ಕಾರ್ಯಕ್ರಮದಲ್ಲಿ ತಾಲ್ಲೂಕಿನ ನಾನಾ ಇಲಾಖೆಯ ಅಧಿಕಾರಿಗಳು ಭಾಗವಹಿಸುವುದರಿಂದ ಸರ್ಕಾರದ ಸೌಲಭ್ಯಗಳಿಂದ ವಂಚಿತ ರಾದವರಿಗೆ ಸ್ಥಳದಲ್ಲಿಯೆ ಪರಿಹಾರ ಸಿಗುತ್ತದೆ ಎಂದು ವಿವರಿಸಿದರು.ಈ ಸಂದರ್ಭದಲ್ಲಿ ತಹಸೀಲ್ದಾರ್ ನಾಗರಾಜ ಭಟ್, ಸರಕಾರಿ ಸಹಾಯಕ ಅಭಿಯೋಜಕ ಮಂಜುನಾಥ್, ವಕೀಲರ ಸಂಘದ ಅಧ್ಯಕ್ಷ ಬಿ.ವಿ.ಶಿವಯೋಗಿ ಮತ್ತು ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.