ಗುರುವಾರ , ಮೇ 19, 2022
21 °C

ಕಾನೂನು ಸಾಕ್ಷರತಾ ರಥಯಾತ್ರೆಗೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ಗ್ರಾಮೀಣ ಪ್ರದೇಶದ ಜನರು ಕಾನೂನಿನ  ಸಾಮಾನ್ಯ ಅರಿವು ಬೆಳೆಸಿಕೊಂಡು ತಮ್ಮ ಸಮಸ್ಯೆಗಳನ್ನು ಇತ್ಯರ್ಥ ಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಶಿವಣ್ಣ ಹೇಳಿದರು.ನಗರದಲ್ಲಿ ಮಂಗಳವಾರ ಕಾನೂನು ಸಾಕ್ಷರತಾ ರಥಯಾತ್ರೆ ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಂದು ಸಮಸ್ಯೆಗೆ ಕೋರ್ಟಿಗೆ ಹೋಗುವ ಪರಿಪಾಠ ಕಡಿಮೆಗೊಳಿಸಿಕೊಂಡು ಸಮಸ್ಯೆಗಳ ಸುಳಿಯಲ್ಲಿ ಸಿಲುಕದಂತೆ ಜಾಗೃತರಾಗ ಬೇಕು ಎಂದು ಹೇಳಿದರು.ಕಾನೂನು ಸಾಕ್ಷರತಾ ರಥ ಯಾತ್ರೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಉಪ ವಿಭಾಗಾಧಿಕಾರಿ    ಡಾ.ಡಿ.ಆರ್.ಅಶೋಕ್, ತಹಶೀಲ್ದಾರ ರಮೇಶ್ ಕೋನಾರೆಡ್ಡಿ, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಕೆ.ರತ್ನಾಕರ ರಾವ್ ಮಾತನಾಡಿದರು.ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಹಾಗೂ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಮಾರುತಿ ಎಸ್.ಬಾಗಡೆ, ಜೆಎಂಎಫ್‌ಸಿ ಹಿರಿಯ ಸಿವಿಲ್ ನ್ಯಾಯಾಧೀಶ  ಕೆ. ನಾರಾಯಣ ಪ್ರಸಾದ, ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲ್ಲೂಕು ಕಾನೂನು ಸೇವೆಗಳ       ಸಮಿತಿ ಕಾರ್ಯ ದರ್ಶಿ ಹತ್ತಿಕಾಳು ಪ್ರಭು ಸಿದ್ದಪ್ಪ, ಸಿವಿಲ್ ನ್ಯಾಯಾಧೀಶ ಎ. ಈರಣ್ಣ, ಸರ್ಕಾರಿ ಅಭಿಯೋಜಕ ಮಂಜುನಾಥ, ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಸುನಂದ, ಡಿವೈಎಸ್‌ಪಿ ಮಡಿವಾಳ, ವಕೀಲರ ಸಂಘದ ಕಾರ್ಯದರ್ಶಿ ಕೊಟ್ರೇಶ್ ಹಿರೇಮಠ, ವಕೀಲರಾದ ಎ. ವಿರೂಪಾಕ್ಷ ರೆಡ್ಡಿ, ಎಸ್.ವಿ.ಜವಳಿ, ಹೆಚ್. ಞಬಿಡ್ಡಪ್ಪ, ಎ.ಎಂ.ಸುರೇಶ್‌ಕುಮಾರ್, ಕೆ.ಎಸ್.ಉದಯಶಂಕರ್, ಎಂ.ಹೆಚ್. ನಂಜುಂಡೇಶ್ವರ ಮುಂತಾ ದವರು ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.