ಮಂಗಳವಾರ, ಮೇ 11, 2021
19 °C

ಕಾನೂನು ಸಾಕ್ಷರತೆ: ಜಾಗೃತಿ ಜಾಥಾಕ್ಕೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಜನತಾ ನ್ಯಾಯಾಲಯ, ಕಾನೂನು ನೆರವು-ಅರಿವು ಕಾರ್ಯಕ್ರಮದ ಬಗ್ಗೆ ಜಾಗೃತಿ ಮೂಡಿಸಿ ಸ್ಥಳದಲ್ಲಿಯೇ ವ್ಯಾಜ್ಯ ಪರಿಹರಿಸುವ ದಿಶೆಯಲ್ಲಿ `ಕಾನೂನು ರಥ' ಹೊರಡುತ್ತಿದೆ. ಸಂಚಾರ ಸುರಕ್ಷತೆ ನಿಯಮಗಳ ಬಗ್ಗೆ ಸಾರಿಗೆ ಅಧಿಕಾರಿ ಮತ್ತು ಸಂಚಾರ ಪೊಲೀಸರು ಜಾಥಾ ಸಂದರ್ಭದಲ್ಲಿ ಜನತೆಗೆ ಮನವರಿಕೆ ಮಾಡಿಕೊಡಲಿದ್ದಾರೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಆರ್.ಜೆ ಸತೀಶಸಿಂಗ್ ಹೇಳಿದರು.



ಗುರುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಎಲ್ಲ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಜನತಾ ನ್ಯಾಯಾಲಯ ಹಾಗೂ ಕಾನೂನು ಅರಿವು-ನೆರವು ಕಾರ್ಯಕ್ರಮದ ಬಗ್ಗೆ ಜಾಗೃತಿ ಮೂಡಿಸಿ ವ್ಯಾಜ್ಯ ಪರಿಹರಿಸುವ ದಿಶೆಯಲ್ಲಿ ಹಮ್ಮಿಕೊಂಡ `ಕಾನೂನು ರಥಕ್ಕೆ' ಹಸಿರು ನಿಶಾನೆ ತೋರಿ ಮಾತನಾಡಿದರು.



ನ್ಯಾಯಾಧೀಶರು, ವಕೀಲರು ಈ ಕಾನೂನು ರಥದ ಸಂಚಾರಿ ನ್ಯಾಯಾಲಯದಲ್ಲಿ ಇರುತ್ತಾರೆ. ವ್ಯಾಜ್ಯ ಪರಿಹರಿಸಲಾಗುತ್ತದೆ. ಕಕ್ಷಿದಾರರು ಈ ಸೇವೆಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ನ್ಯಾಯಾಧೀಶರಾದ ಮಹಮ್ಮದ್ ಮುಜಾಹಿದುಲ್ಲಾ, ನ್ಯಾಯಾಧೀಶರು ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.