ಸೋಮವಾರ, ಜೂನ್ 14, 2021
22 °C

ಕಾನೂನು ಸುವ್ಯವಸ್ಥೆ ಕಾಪಾಡಲು ಆದ್ಯತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಲಾಭೂರಾಂ ಅವರು ಭಾನುವಾರ ಅಧಿಕಾರ ವಹಿಸಿಕೊಂಡರು.ಮಧ್ಯಾಹ್ನ 2ರ ವೇಳೆಗೆ ಜಿಲ್ಲಾ ಪ್ರಭಾರ ಪೊಲೀಸ್ ವರಿಷ್ಠಾಧಿಕಾರಿ ಬಿ.ಟಿ. ಚವ್ಹಾಣ್ ಅವರಿಂದ ಅಧಿಕಾರ ವಹಿಸಿಕೊಂಡರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಗೌರವ ವಂದನೆ ಸ್ವೀಕರಿಸಿ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು.ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾವಣಗೆರೆ ಈ ಹಿಂದೆ ಕೋಮು ಸೂಕ್ಷ್ಮ ಪ್ರದೇಶವಾಗಿತ್ತು. ಉಳಿದಂತೆ ಚಿತ್ರದುರ್ಗ ಮತ್ತು ದಾವಣಗೆರೆಗೆ ಬಹಳ ವ್ಯತ್ಯಾಸವೇನಿಲ್ಲ. ಒಟ್ಟಿನಲ್ಲಿ ಜಿಲ್ಲೆ ಬಗ್ಗೆ ಎಲ್ಲ ಮಾಹಿತಿಯನ್ನು ಇನ್ನಷ್ಟೇ ತಿಳಿದುಕೊಳ್ಳಬೇಕಿದೆ. ಮಾರ್ಚ್ 26ರಂದು ಬಡಾವಣೆ ಠಾಣೆ ಹಾಗೂ ಇತರ ಠಾಣೆಗಳಲ್ಲಿ  ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಸಂಗ್ರಹಿಸಲಾಗುವುದು. ಪೊಲೀಸ್ ಮತ್ತು ಸಾರ್ವಜನಿಕರ ಮಧ್ಯೆ ಸ್ನೇಹ ಕಾಯ್ದುಕೊಳ್ಳಲು ಪ್ರಯತ್ನಿಸಲಾಗುವುದು. ಸಂಚಾರ, ಕಾನೂನು ಸುವ್ಯವಸ್ಥೆ, ರಾತ್ರಿ ಗಸ್ತು ಇತ್ಯಾದಿ ಬಗ್ಗೆ ನಿರ್ದಿಷ್ಟ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.ಸಾರ್ವಜನಿಕರು ಯಾವುದೇ ಮಾಹಿತಿಯನ್ನು ತಮಗೆ ನೇರವಾಗಿ ನೀಡಬಹುದು (ಮೊಬೈಲ್: 9448084440). ಕಾನೂನು ಸುವ್ಯವಸ್ಥೆ ಕಾಪಾಡಲು ಎಲ್ಲರೂ ಸಹಕರಿಸಬೇಕು ಎಂದು ಕೋರಿದರು.ಲಾಭೂರಾಂ ಹಿನ್ನೆಲೆ: 2004ರ ಐಪಿಎಸ್ ಬ್ಯಾಚ್‌ನ ಲಾಭೂರಾಂ ಮಂಗಳೂರಿನಲ್ಲಿ ಪ್ರೊಬೇಷನ್ ಅಧಿಕಾರಿಯಾಗಿದ್ದರು. ಬಳಿಕ ಉಡುಪಿ, ಕಾರ್ಕಳದಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು.

 

ಚಿತ್ರದುರ್ಗ, ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ ಅವರು, ತುಮಕೂರು ಜಿಲ್ಲೆಯ ಪ್ರಭಾರ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೆಲಕಾಲ ಕಾರ್ಯನಿರ್ವಹಿಸಿದ್ದರು. ಪೊಲೀಸ್ ನಿರ್ವಹಣೆ ವಿಷಯದಲ್ಲಿ ಎಂಎಸ್‌ಸಿ ಪದವೀಧರರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.