ಮಂಗಳವಾರ, ಏಪ್ರಿಲ್ 13, 2021
32 °C

ಕಾಮಗಾರಿ ಗುಣಮಟ್ಟ: ಎಚ್ಚರಿಕೆ ವಹಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜರಾಜೇಶ್ವರಿನಗರ: ಕೆ.ಗೊಲ್ಲಹಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವೆ ಶೋಭಾ ಕರಂದ್ಲಾಜೆ ಅವರು ಇತ್ತೀಚೆಗೆ ಚಾಲನೆ ನೀಡಿದರು.ರೂ. 1.29 ಕೋಟಿ ವೆಚ್ಚದಲ್ಲಿ ತಿಪ್ಪೂರು- ಗೋಣಿಪುರ ರಸ್ತೆ ಅಭಿವೃದ್ಧಿ, ಗೊಲ್ಲಹಳ್ಳಿಯಲ್ಲಿ ಹಾಲು ಉತ್ಪಾದಕರ ಸಂಘದ ಕಟ್ಟಡ, ಕುಳ್ಳೇಗೌಡನ ಪಾಳ್ಯದಲ್ಲಿ ಅಂಗನವಾಡಿ ಕಟ್ಟಡ, ಸಮುದಾಯ ಭವನದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.ನಂತರ ಮಾತನಾಡಿದ ಸಚಿವರು, `ಕಾಮಗಾರಿಗಳ ಗುಣಮಟ್ಟದ ಬಗ್ಗೆ ಎಚ್ಚರಿಕೆ ವಹಿಸಬೇಕು. ಆಗ ಮಾತ್ರ ಸಾರ್ವಜನಿಕರ ಹಣ ಸದುಪಯೋಗವಾಗುವುದು~ ಎಂದರು.ಜಿಲ್ಲಾ ಪಂಚಾಯ್ತಿ ಸದಸ್ಯ ಎ.ಶಿವಕುಮಾರ್ ಮಾತನಾಡಿ ರೂ. 2 ಕೋಟಿ ವೆಚ್ಚದಲ್ಲಿ ಉತ್ತರಿ- ಕಗ್ಗಲೀಪುರ ರಸ್ತೆ ಅಭಿವೃದ್ಧಿ, ಅಗರ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯಲ್ಲಿ ರೂ. 2 ಕೋಟಿ ವೆಚ್ಚದಲ್ಲಿ ಎಲ್ಲಾ ಕೆರೆಗಳ ಅಭಿವೃದ್ಧಿ  ಕಾಮಗಾರಿ ಕೈಗೊಳ್ಳಲಾಗಿದೆ ಎಂದರು.ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ವೆಂಕಟಮ್ಮ ರೇವಣ್ಣಸಿದ್ದಯ್ಯ, ಜಾಗೃತಿ ಸಮಿತಿ ಅಧ್ಯಕ್ಷ ಜಿ.ವಿಜಯಕುಮಾರ್, ಬಿಜೆಪಿ ಮುಖಂಡರಾದ ಎಚ್.ಎಲ್. ಯುವಬಿಜೆಪಿ ಪ್ರಧಾನ ಕಾರ್ಯದರ್ಶಿ  ಚಳ್ಳಗಟ್ಟಜಿ.ಮಂಜುನಾಥ್ , ಗ್ರಾಮ ಪಂಚಾಯ್ತಿ ಅಧ್ಯಕ್ಷ ಬಿ.ಎಲ್.ನಾರಾಯಣಸ್ವಾಮಿ, ಮಾಜಿ ಅಧ್ಯಕ್ಷ ಬೆಟ್ಟಯ್ಯ ಸದಸ್ಯ ಹಂಪಾಪುರ ರವಿಕುಮಾರ್ ಮತ್ತಿತತರರು ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.