ಕಾಮಗಾರಿ ಗುಣಮಟ್ಟ ಕಾಯ್ದುಕೊಳ್ಳಲು ಸೂಚನೆ

6

ಕಾಮಗಾರಿ ಗುಣಮಟ್ಟ ಕಾಯ್ದುಕೊಳ್ಳಲು ಸೂಚನೆ

Published:
Updated:

ಯಲಹಂಕ: ಸರ್ವ ಶಿಕ್ಷಣ ಅಭಿಯಾನ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿರುವ ಬ್ಯಾಟರಾಯನಪುರ ಸರ್ಕಾರಿ ಪಾಥಮಿಕ ಶಾಲೆಯ ಐದು ನೂತನ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಶಾಸಕ ಕೃಷ್ಣ ಬೈರೇಗೌಡ ಗುದ್ದಲಿಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭವಿಷ್ಯದ ದೃಷ್ಟಿ ಇಟ್ಟುಕೊಂಡು ಕಾಮಗಾರಿಯಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು ಎಂದು ಎಂಜಿನಿಯರ್ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.ಬಿಬಿಎಂಪಿ ವತಿಯಿಂದ ಕೈಗೆತ್ತಿಕೊಂಡಿರುವ ಮೂರು ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಬಿಬಿಎಂಪಿ ಸದಸ್ಯೆ ಎನ್.ಇಂದಿರಾ ಗುದ್ದಲಿಪೂಜೆ ಮಾಡಿದರು.ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರವಿ ಕುಮಾರ್, ಮುಖ್ಯ ಶಿಕ್ಷಕ ನಾರಾಯಣ ಸ್ವಾಮಿ, ಎಸ್‌ಡಿಎಂಸಿ ಅಧ್ಯಕ್ಷ ಎನ್.ಆದಿರಾಮು, ಉಪಾಧ್ಯಕ್ಷ ಬಿ.ಎಸ್.ಮುನಿರಾಜು, ಸದಸ್ಯರು ಹಾಗೂ ಗ್ರಾಮದ ಮುಖಂಡರು ಭಾಗವಹಿಸಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry