ಶುಕ್ರವಾರ, ಮೇ 14, 2021
32 °C

ಕಾಯಂ ಶಿಕ್ಷಕರನ್ನು ನೇಮಿಸಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ತಾಲ್ಲೂಕಿನ ವಕ್ಕಲೇರಿ ಹೋಬಳಿಯ ವಡಗೆರೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಕಾಯಂ ಶಿಕ್ಷಕರನ್ನು ನೇಮಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಈಚೆಗೆ ಧರಣಿ ನಡೆಸಿದರು.  ಶಾಲೆಯ ಸಹಶಿಕ್ಷಕಿ ವಿ.ಎಸ್.ವೀಣಾ ಎಂಬುವರು 2003ರಲ್ಲಿ ಕರ್ತವ್ಯಕ್ಕೆ ಹಾಜರಾದ ಬಳಿಕ ಇಲ್ಲಿಯವರೆಗೂ ಕೋಲಾರದ ಹಾರೋಹಳ್ಳಿಯ ಶಾಲೆಯಲ್ಲಿ ನಿಯೋಜನೆ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ.ವಡಗೆರೆ ಶಾಲೆಯ ಮಕ್ಕಳಿಗೆ ಅದರಿಂದ ಅನಾನುಕೂಲವಾಗುತ್ತಿದೆ. ಕೂಡಲೇ ಶಿಕ್ಷಣ ಇಲಾಖೆ ಕಾಯಂ ಶಿಕ್ಷಕರನ್ನು ನೇಮಿಸಬೇಕು ಎಂದುಆಗ್ರಹಿಸಿದರು. ಮುಖಂಡರಾದ ಕೆಂಪಣ್ಣ, ಶಾಮಣ್ಣ, ಕೆ.ವಿ.ವೆಂಕಟೇಶ್ ನೇತೃತ್ವ ವಹಿಸಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.