ಬೆಂಗಳೂರು: ‘ಕೆಎಂಸಿ ಕಾಯ್ದೆ ಹಾಗೂ ಹೈಕೋರ್ಟ್ ಈ ಹಿಂದೆ ನೀಡಿರುವ ಆದೇಶದನ್ವಯ ಮೇಯರ್ ಹಾಗೂ ಉಪಮೇಯರ್ ಚುನಾವಣೆಯ ದಿನವೇ ಎಲ್ಲ ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆಗೆ ಚುನಾವಣೆ ನಡೆಸಬೇಕು. ಇಲ್ಲದಿದ್ದರೆ ಪಕ್ಷದ ವತಿಯಿಂದ ಕಾನೂನು ಹೋರಾಟ ನಡೆಸಲಾಗುವುದು’ ಎಂದು ಬಿಬಿಎಂಪಿ ಜೆಡಿಎಸ್ ನಾಯಕ ಪದ್ಮನಾಭರೆಡ್ಡಿ ಹೇಳಿದರು.

‘ಕೆಎಂಸಿ ಕಾಯ್ದೆಯ 11(2)ನೇ ನಿಯಮದನ್ವಯ ಮೇಯರ್ ಹಾಗೂ ಉಪಮೇಯರ್ ಚುನಾವಣೆಯ ದಿನವೇ ಎಲ್ಲ ಸ್ಥಾಯಿ ಸಮಿತಿಗಳಿಗೆ ಚುನಾವಣೆ ನಡೆಸಬೇಕು. ಅದರಂತೆ 2010ರ ಏಪ್ರಿಲ್ 23ರಂದು ಮೇಯರ್, ಉಪಮೇಯರ್ ಆಯ್ಕೆಗೆ ಚುನಾವಣೆ ನಡೆದ ದಿನವೇ ಸ್ಥಾಯಿ ಸಮಿತಿ ಚುನಾವಣೆ ನಡೆಯಬೇಕಿತ್ತು. ಆದರೆ ಕೆಎಂಸಿ ಕಾಯ್ದೆ ನಿಯಮಗಳನ್ನು ಬಿಜೆಪಿ ಆಡಳಿತ ಗಾಳಿಗೆ ತೂರಿದ್ದು, ಚುನಾವಣೆ ನಡೆಸಲಿಲ್ಲ’ ಎಂದು ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

‘1998ರಲ್ಲಿ ತೆರಿಗೆ, ಅರ್ಥಿಕ ಮತ್ತು ಮೇಲ್ಮನವಿ ಸ್ಥಾಯಿ ಸಮಿತಿಗೆ ನಾಲ್ಕು ತಿಂಗಳು ತಡವಾಗಿ ಚುನಾವಣೆ ನಡೆದಿತ್ತು. ಆ ಸಮಿತಿಯು ಒಂದು ವರ್ಷ ಅಧಿಕಾರಾವಧಿ ಪೂರ್ಣಗೊಳಿಸುವ ಸಲುವಾಗಿ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗಿತ್ತು. ಆಗ ನ್ಯಾಯಾಲಯದಲ್ಲಿ ಪಾಲಿಕೆ ಪರ ವಾದ ಮಂಡಿಸಿದ್ದ ಅಶೋಕ್ ಹಾರ್ನಳ್ಳಿ ಅವರು ಕೆಎಂಸಿ ಕಾಯ್ದೆ 11(2)ರ ನಿಯಮದನ್ವಯ ಮೇಯರ್, ಉಪಮೇಯರ್ ಚುನಾವಣೆ ದಿನವೇ ಸ್ಥಾಯಿ ಸಮಿತಿಗಳ ಚುನಾವಣೆ ನಡೆಸಬೇಕು ಎಂದಿದ್ದರು. ಇದನ್ನು ಹೈಕೋರ್ಟ್ ಸಹ ಎತ್ತಿ ಹಿಡಿದಿತ್ತು’ ಎಂದು ಹೇಳಿದರು.

‘ಬಿಜೆಪಿಯ ಕೈಗೊಂಬೆಯಾಗಿರುವ ರಾಜ್ಯದ ಸರ್ಕಾರದ ಅಡ್ವೊಕೇಟ್ ಜನರಲ್ ಅಶೋಕ್ ಹಾರ್ನಳ್ಳಿ ಅವರು ರಾಜಕೀಯ ಒತ್ತಡಕ್ಕೆ ಮಣಿದು ಇದೀಗ ರಾಗ ಬದಲಿಸಿದ್ದಾರೆ. ಸ್ಥಾಯಿ ಸಮಿತಿ ಸದಸ್ಯರು ಒಂದು ವರ್ಷ ಕಾಲ ಅಧಿಕಾರದಲ್ಲಿ ಮುಂದುವರಿಯಲು ತೊಂದರೆಯಿಲ್ಲ ಎಂದು ಕಾನೂನು ಸಲಹೆ ನೀಡಿದ್ದಾರೆ’ ಎಂದು ದೂರಿದರು.

‘ಈ ನಡುವೆ ಸಚಿವರಾದ ಆರ್.ಅಶೋಕ ಹಾಗೂ ಸಚಿವ ಎಸ್.ಸುರೇಶ್ ಕುಮಾರ್ ಅವರು ತದ್ವಿರುದ್ದ ಹೇಳಿಕೆ ನೀಡಿರುವುದು ಗೊಂದಲ ಸೃಷ್ಟಿಸಿದೆ’ ಎಂದರು.

‘ಕೆಎಂಸಿ ಕಾಯ್ದೆ ಉಲ್ಲಂಘಿಸಿ ಸಮಿತಿ ಸದಸ್ಯರ ಅಧಿಕಾರಾವಧಿಯನ್ನು ಒಂದು ವರ್ಷದವರೆಗೆ ಮುಂದುವರಿಸಿದರೆ ಕಾನೂನು ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

‘ಈ ಸಂಬಂಧ ಕಾನೂನು ಸಚಿವರು, ಗೃಹ ಸಚಿವರು, ಮೇಯರ್, ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ, ಪ್ರಾದೇಶಿಕ ಆಯುಕ್ತರು, ಬಿಬಿಎಂಪಿ ಆಯುಕ್ತರು ಹಾಗೂ ಪಾಲಿಕೆ ಕೌನ್ಸಿಲ್ ಕಾರ್ಯದರ್ಶಿಗಳಿಗೆ ಪತ್ರ ಬರೆಯಲಾಗಿದೆ’ ಎಂದು ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.