ಸೋಮವಾರ, ಮಾರ್ಚ್ 8, 2021
29 °C

ಕಾರಂತರ ಪುತ್ಥಳಿ ಅನಾವರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರಂತರ ಪುತ್ಥಳಿ ಅನಾವರಣ

ದೊಡ್ಡಬಳ್ಳಾಪುರ: ಜವಾಹರ್‌ ನವೋದಯ ವಿದ್ಯಾಲಯದಲ್ಲಿ ಗಣರಾಜ್ಯೋತ್ಸವ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಶಿವರಾಮ ಕಾರಂತರ ಪುತ್ಥಳಿ ಅನಾವರಣ ಮಾಡಲಾಯಿತು.ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ನಾರಾಯಣಮ್ಮ ಧ್ವಜಾರೋಹಣ ಮಾಡಿದರು. ಸಮಾರಂಭದಲ್ಲಿ ಕೆ.ಎಂ.ಎಫ್ ಉಪನಿರ್ದೇಶಕ ಚೆನ್ನಸೋಮಣ್ಣ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷ ಹುಲಿಕಲ್ ನಟರಾಜ್, ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.ಸಮಾರಂಭದ ಅಧ್ಯಕ್ಷತೆಯನ್ನು ವಿದ್ಯಾಲಯದ ಪ್ರಾಚಾರ್ಯ ಆರ್.ಚಕ್ರವರ್ತಿ ವಹಿಸಿದ್ದರು.  ಸಮಾರಂಭಕ್ಕೂ ಮುನ್ನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಆಧ್ಯಕ್ಷ ದಿವಂಗತ ಆರ್.ಎನ್.ನಾಗರಾಜ್ (ನಾಗಪ್ರಿಯ) ಅವರು ನೀಡಿದ ಧನಸಹಾಯದಿಂದ ನಿರ್ಮಿತವಾಗಿರುವ ಡಾ.ಶಿವರಾಮ ಕಾರಂತರ ಪುತ್ಥಳಿಯನ್ನು ನಾಗಪ್ರಿಯ ಅವರ ಪತ್ನಿ ರೇಣುಕಾ ಅನಾವರಣಗೊಳಿಸಿದರು.ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪಥಸಂಚಲನ, ದೇಶಭಕ್ತಿಗೀತೆ, ಭಾಷಣಗಳನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಡಾ.ಶಿವರಾಮ ಕಾರಂತರ ಪುತ್ಥಳಿಯ ದಾನಿ ರೇಣುಕಾ ನಾಗಪ್ರಿಯ ಅವರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಶಿಕ್ಷಕರಾದ ವಿ.ಎಸ್.ಹೆಗಡೆ ಸುಬ್ರಹ್ಮಣ್ಯ, ಪಿ.ಜಯರಂಗಪ್ಪ ಮತ್ತಿತರರು ಭಾಗವಹಿಸಿದ್ದರು. ಎಂ.ಎಸ್.ವಿ. ಪಬ್ಲಿಕ್ ಶಾಲೆಯಲ್ಲಿ ನಡೆದ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಲೇಖಕಿ ಕೆ.ಎಸ್.ಪ್ರಭಾ ಮಾತನಾಡಿದರು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಎ.ಸುಬ್ರಮಣಿ, ಕಾರ್ಯದರ್ಶಿ ಮಂಜುಳ, ಪ್ರಾಂಶುಪಾಲ ವಿಜಯಭಾಸ್ಕರರೆಡ್ಡಿ ಮತ್ತಿತರರು ಭಾಗವಹಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.