ಕಾರಿಗೆ ಬಸ್ ಡಿಕ್ಕಿ: 6 ಮಂದಿ ಸಾವು

ಸೋಮವಾರ, ಮೇ 20, 2019
33 °C

ಕಾರಿಗೆ ಬಸ್ ಡಿಕ್ಕಿ: 6 ಮಂದಿ ಸಾವು

Published:
Updated:

ಹಾಸನ: ಸೋಮವಾರ ನಸುಕಿನ 3.15ರ ಸುಮಾರಿಗೆ ಹಾಸನ ಹೊರವಲಯದ ಕೆಂಚಟ್ಟಹಳ್ಳಿಯ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೊಬ್ಬರು ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ.ಮೃತಪಟ್ಟವರೆಲ್ಲ ಚಿಕ್ಕಮಗಳೂರಿನ ಶರೀಫ್ ಕಾಲೋನಿಯ ನಿವಾಸಿಗಳಾಗಿದ್ದು, ಮಾರುತಿ 800 ಕಾರಿನಲ್ಲಿ ಬೆಂಗಳೂರಿನಿಂದ ಚಿಕ್ಕಮಗಳೂರಿನತ್ತ ಹೊರಟಿದ್ದರು.  ಇಲ್ಲಿನ ವಿಧಾತಾ ಡಾಬಾದ ಸಮೀಪ ಬಂದಾಗ ಹಿಂದಿನಿಂದ ವೇಗವಾಗಿ ಬಂದ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.ಘಟನೆಯಲ್ಲಿ ಕಾರು ಓಡಿಸುತ್ತಿದ್ದ ಇಸ್ರಾರ್ (24), ಶಬನಂ (17), ಜುನೇದ್ (12), ವಾಸಿಂ (22), ರೆಹಮಾನ್ (24) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಲೆಗೆ ತೀವ್ರ ಪೆಟ್ಟು ಬಿದ್ದಿರುವ ಇಮ್ರಾನ್ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರೂ ಮೃತಪಟ್ಟಿದ್ದಾರೆ.ಕಾರಿನಲ್ಲಿದ್ದ ಮಹಿಳೆ ಹೀರಾನಾಜ್ ಪವಾಡ ಸದೃಶವಾಗಿ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಇವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರಲ್ಲಿ ಶಬನಂ ಹಾಗೂ ಜುನೇದ್ ಎಂಬುವವರು ಹೀರಾನಾಜ್ ಮಕ್ಕಳು. ಅಪಘಾತದ ರಭಸಕ್ಕೆ ಮಾರುತಿ 800 ಕಾರು ನಜ್ಜುಗುಜ್ಜಾಗಿದೆ. ಕಾರಿನೊಳಗೆ ಸಿಲುಕಿದ್ದ ದೇಹಗಳನ್ನು ಹೊರತೆಗೆಯಲು ಪೊಲೀಸರು ಹರಸಾಹಸ ಪಟ್ಟರು. ಹಾಸನ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry