ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ: ಇಬ್ಬರ ವಶ

7

ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ: ಇಬ್ಬರ ವಶ

Published:
Updated:

ನವದೆಹಲಿ (ಪಿಟಿಐ): ಮಹಿಳಾ ಕಾನ್‌ಸ್ಟೆಬಲ್‌ ಒಬ್ಬರ 23 ವರ್ಷದ ಮಗಳ ಮೇಲೆ ಯುವತಿಯ ಗೆಳೆಯ ಹಾಗೂ ಆತನ ಇಬ್ಬರು ಸ್ನೇಹಿತರು ಚಲಿಸುತ್ತಿದ್ದ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಆಕೆಯನ್ನು ಕಾರಿನಿಂದ ರಸ್ತೆ ಬದಿಗೆ ಎಸೆದು ಹೋಗಿದ್ದಾರೆ.ದಕ್ಷಿಣ ದೆಹಲಿಯ ನೆಹರೂ ಪ್ಲೇಸ್‌ ಬಳಿ  ಮಂಗಳವಾರ ತಡ ರಾತ್ರಿ ಈ ಘಟನೆ ನಡೆದಿದೆ. ಈ ಸಂಬಂಧ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಯುವತಿಯೊಂದಿಗೆ ಕಾರಿನಲ್ಲಿ ತಡ ರಾತ್ರಿ ವಿಹಾರ ಮಾಡುತ್ತಿದ್ದ ಆರೋಪಿಗಳು, ಆಕೆಗೆ ಮತ್ತುಬರುವ ಔಷಧಿ ಬೆರೆಸಿದ ತಂಪು ಪಾನೀಯ ಕುಡಿಸಿದ್ದಾರೆ. ಪ್ರಜ್ಞಾಹೀನಳಾದ ಆಕೆ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.‘ರಸ್ತೆ ಬದಿ ಬಿದ್ದಿದ್ದ ಆಕೆಯನ್ನು ಅದೇ ಮಾರ್ಗದಲ್ಲಿ ಸಾಗುತ್ತಿದ್ದ ಆಟೊ ಚಾಲಕರೊಬ್ಬರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಪೊಲೀಸರು ಯುವತಿಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದರು’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.ವೈದ್ಯಕೀಯ ಪರೀಕ್ಷೆಯಿಂದ ಆಕೆ ಮೇಲೆ ಅತ್ಯಾಚಾರ ನಡೆದಿರುವುದು ದೃಢ­ಪಟ್ಟಿದೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದೂ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry