ಮಂಗಳವಾರ, ಮೇ 11, 2021
26 °C

ಕಾರು ಅಪಘಾತ: ನಾಲ್ವರಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶನಿವಾರಸಂತೆ: ಸಮೀಪದ ದುಂಡಳ್ಳಿ ಗ್ರಾಮದ ಬಳಿ ತಾಂತ್ರಿಕ ದೋಷದಿಂದ ಅಪಘಾತಕ್ಕೀಡಾದ ಕಾರೊಂದು ಹೊತ್ತಿಕೊಂಡು ಉರಿದ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ. ಘಟನೆಯಲ್ಲಿ ನಾಲ್ವರಿಗೆ ಸುಟ್ಟ ಗಾಯಗಳಾಗಿವೆ. ದೇವರಾಜು, ಸಂಜು, ಚಂದ್ರಕುಮಾರ್, ಗಣೇಶ್ ಗಾಯ ಗೊಂಡವರು. ಇವರೆಲ್ಲರೂ ಯಸಳೂರಿನಿಂದ ಶನಿವಾರಸಂತೆಗೆ ಬರುತ್ತಿದ್ದಾಗ ದುಂಡಳ್ಳಿ ರಸ್ತೆಯ ಮೋರಿಗೆ ಡಿಕ್ಕಿ ಹೊಡೆದು ಪಕ್ಕಕ್ಕೆ ಮಗುಚಿಕೊಂಡು ಬೆಂಕಿ ಹೊತ್ತಿ ಕೊಂಡಿತು ಎನ್ನಲಾಗಿದೆ. ಗಾಯಾಳು ಗಳಿಗೆ ಶನಿವಾರಸಂತೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.