ಕಾರು ಅಪಘಾತ: ಮಹಿಳೆ ಸಾವು

7

ಕಾರು ಅಪಘಾತ: ಮಹಿಳೆ ಸಾವು

Published:
Updated:

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆ ಮೃತಪಟ್ಟು, ಒಂದೇ ಕುಟುಂಬದ ನಾಲ್ವರು ಗಾಯಗೊಂಡ ಘಟನೆ ತಾಲ್ಲೂಕಿನ ಮರಸನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ-7ರ ಬಳಿ ಭಾನುವಾರ ಮಧ್ಯಾಹ್ನ ನಡೆದಿದೆ.ದೇವನಹಳ್ಳಿಯ ಪ್ರಶಾಂತನಗರ ನಿವಾಸಿ ಶ್ರೀದೇವಿ (60) ಮೃತಪಟ್ಟವರು. ಇವರ ಪುತ್ರ ರಾಜಶೇಖರ್, ಸೊಸೆ ಮಂಜುಳಾ, ಮೊಮ್ಮಗ ನಿಶಾಂತ್, ಸಂಬಂಧಿಕರಾದ ಶಿಲ್ಪಾ ಗಾಯಗೊಂಡಿದ್ದಾರೆ. ಇವರೆಲ್ಲ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ನಡೆದ ಮದುವೆಯಲ್ಲಿ ಪಾಲ್ಗೊಂಡ ರಾಜಶೇಖರ್ ಅವರು ಕುಟುಂಬ ಸದಸ್ಯರೊಂದಿಗೆ ಕಾರಿನಲ್ಲಿ ದೇವನಹಳ್ಳಿಯಲ್ಲಿರುವ ತಮ್ಮ ಮನೆಗೆ ಮರಳುತ್ತಿದ್ದರು. ರಾಜಶೇಖರ್ ಅವರೇ ಕಾರು ಚಾಲನೆ ಮಾಡುತ್ತಿದ್ದರು. ಮರಸನಹಳ್ಳಿ ಗ್ರಾಮದ ಬಳಿ ಬರುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡ ಪರಿಣಾಮ ಕಾರು ರಸ್ತೆ ಬದಿಗೆ ಉರುಳಿಬಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry