ಮಂಗಳವಾರ, ಮೇ 18, 2021
30 °C

ಕಾರು ಉರುಳಿ ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಕೋಟೆ: ಕೋಲಾರ ರಸ್ತೆಯ ಕೊಳತೂರು ಗೇಟ್ ಬಳಿ ಶುಕ್ರವಾರ ರಾತ್ರಿ ಮಾರುತಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಮಗುಚಿ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟು ಇತರ ನಾಲ್ಕು ಜನಕ್ಕೆ ಗಾಯಗಳಾಗಿವೆ.ಚಿತ್ತೂರು ಮೂಲದ ರಾಮಬಾಬು (28) ಮೃತಪಟ್ಟವರು. ಬೆಂಗಳೂರಿನ ಬನಶಂಕರಿಯಲ್ಲಿ ವಾಸವಾಗಿದ್ದ ಅವರು ಖಾಸಗಿ ಕಂಪನಿಯಲ್ಲಿ ಕೆಲಸಮಾಡುತ್ತಿದ್ದರು.ಅವರು ಏ. 18 ರಂದು ತನ್ನ ಸ್ನೇಹಿತ ಶೋಭನ್ ಬಾಬುವಿನ ಕಾರಿನಲ್ಲಿ ಚಿತ್ತೂರಿಗೆ ಹೋಗಿದ್ದು ಅಲ್ಲಿಂದ ಹಿಂದಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಕಾರು ಚಾಲನೆ ಮಾಡುತ್ತಿದ್ದ ಶೋಭನ್‌ಬಾಬು, ಆತನ ಅತ್ತೆ, ಮಾವ ಹಾಗು ಮತ್ತೊಬ್ಬ ಮಹಿಳೆಗೆ ಗಾಯಗಳಾಗಿದ್ದು ಅವರನ್ನು ಬೆಂಗಳೂರಿನ ಕೆಂಪೇಗೌಡ ಆಸ್ಪತ್ರೆಗೆ ದಾಖಲಿಸಲಾಗಿದೆ.ಹೊಸಕೋಟೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.