ಗುರುವಾರ , ನವೆಂಬರ್ 21, 2019
20 °C

ಕಾರು ಡಿಕ್ಕಿ: ಪಾದಚಾರಿ ಸಾವು

Published:
Updated:

ಹೊಸಕೋಟೆ: ಕೋಲಾರ ರಸ್ತೆಯ ಎಂವಿಜೆ ಆಸ್ಪತ್ರೆ ಬಳಿ ಕಾರು ಡಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ತಾಲ್ಲೂಕಿನ ವಾಗಟ ಗ್ರಾಮದ ಮುಸ್ತಫಾ (50) ಮೃತಪಟ್ಟವರು. ಹೆದ್ದಾರಿಯ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ಅವರು ಬಂದಿದ್ದರು. ಕಾರು ಹೊಸಕೋಟೆ ಕಡೆಯಿಂದ ಕೋಲಾರದ ಕಡೆಗೆ ಹೋಗುತ್ತಿತ್ತು. ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಕಳವು: ಪಟ್ಟಣದ ಕಾಲೇಜು ರಸ್ತೆಯಲ್ಲಿನ ಮೊಬೈಲ್ ಮಾರಾಟ ಅಂಗಡಿಯ ಬಾಗಿಲ ಬೀಗ ಮುರಿದು ಒಳನುಗ್ಗಿದ ಕಳ್ಳರು ಅಂಗಡಿಯಲ್ಲಿದ್ದ ರೂ. 35 ಸಾವಿರ ನಗದು, ಸ್ಯಾಮ್‌ಸಂಗ್ ಹಾಗೂ ಇತರ ಕಂಪೆನಿಗಳಿಗೆ ಸೇರಿದ 45 ಮೊಬೈಲ್‌ಗಳನ್ನು ಕಳವು ಮಾಡಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಕಳವಾದ ವಸ್ತುಗಳ ಒಟ್ಟು ಬೆಲೆ ರೂ. 4.65 ಲಕ್ಷ ಎಂದು ಅಂಗಡಿಯ ಮಾಲೀಕ ನವೀದ್ ಅಹಮದ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ನಡೆಸಿದ್ದಾರೆ.ವಶ: ಹೆದ್ದಾರಿಯ ಕಾಟಂನಲ್ಲೂರು ಕ್ರಾಸ್ ಬಳಿಯ ಚೆಕ್‌ಪೋಸ್ಟ್‌ನಲ್ಲಿ ಪೊಲೀಸರು 2 ಕಾರುಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಒಟ್ಟು ರೂ. 4.50 ಲಕ್ಷ ನಗದನ್ನು ಶನಿವಾರ ವಶಪಡಿಸಿಕೊಂಡಿದ್ದಾರೆ. ಕಾರುಗಳು ಬೆಂಗಳೂರು ಕಡೆಯಿಂದ ಕೋಲಾರದ ಕಡೆಗೆ ಹೋಗುತ್ತಿದ್ದವು. ಆವಲಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಪ್ರತಿಕ್ರಿಯಿಸಿ (+)