ಸೋಮವಾರ, ಏಪ್ರಿಲ್ 12, 2021
23 °C

ಕಾರು ಪಲ್ಟಿ: ಮಗು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೇವನಹಳ್ಳಿ: ದೊಡ್ಡಬಳ್ಳಾಪುರ ಕಡೆಯಿಂದ ಬರುತ್ತಿದ್ದ ಟಾಟಾ ಸುಮೊ ಕಾರು ಚಾಲಕನ ನಿಯಂತ್ರಣ ತಪ್ಪಿ ದೇವನಹಳ್ಳಿ ದೊಡ್ಡಕೆರೆಗೆ ಉರುಳಿದ ಪರಿಣಾಮ ಏಳು ತಿಂಗಳ ಮಗು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.

 

ಘಟನೆಯಲ್ಲಿ ಸಾವನ್ನಪ್ಪಿರುವ ಗಂಡು ಮಗುವನ್ನು ಅಶ್ವಿನ್ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುಟುಂಬದವರು ಬೆಂಗಳೂರು ಉತ್ತರ ತಾಲ್ಲೂಕಿನ ಬೆಟ್ಟದಲಸೂರು ಗ್ರಾಮದವರು. ಮಗುವಿನ ತಂದೆ ಪ್ರವೀಣ್ ಹಾಗೂ ತಾಯಿ ಅರುಣಾ ಎನ್ನಲಾಗಿದೆ.  ಸಂಬಂಧಿಕರ ಗೃಹ ಪ್ರವೇಶಕ್ಕೆ ದೊಡ್ಡಬಳ್ಳಾಪುರಕ್ಕೆ ತೆರಳಿ ಹಿಂತಿರುಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಇಬ್ಬರಜಗಳ ಕೊಲೆಯಲ್ಲಿ ಅಂತ್ಯ (ದೊಡ್ಡಬಳ್ಳಾಪುರ): ಕುಡಿದ ಅಮಲಿನಲ್ಲಿ ಅನಾವಶ್ಯಕ ವಿಚಾರಕ್ಕೆ ಇಬ್ಬರು ಸ್ನೇಹಿತರ ನಡುವೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ತಾಲ್ಲೂಕಿನ ಮಧುರೆ ಹೋಬಳಿಯ ಮಾರಸಂದ್ರ ಗ್ರಾಮದಲ್ಲಿ ನಡೆದಿದೆ.ಕೊಲೆಯಾದ ವ್ಯಕ್ತಿಯನ್ನು ರಾಮಾಂಜಿನಪ್ಪ (25) ಎಂದು ಗುರುತಿಸಲಾಗಿದೆ. ಕೊಲೆ ಮಾಡಿರುವ ಆರೋಪಿ ನಟರಾಜ್ ತಲೆಮರೆಸಿಕೊಂಡಿದ್ದಾನೆ.ರೈಲ್ವೆಗೊಲ್ಲಹಳ್ಳಿ ಸಮೀಪದ ಬಾರ್‌ನಲ್ಲಿ ಶನಿವಾರ ರಾತ್ರಿ 9 ಗಂಟೆ ಸಮಯದಲ್ಲಿ ರಾಮಾಂಜಿನಪ್ಪ ಹಾಗೂ ಆತನ ಸ್ನೇಹಿತ ಟೆಂಪೋ ಡ್ರೈವರ್ ನಟರಾಜ್ ಕುಡಿಯುತ್ತ ಕುಳಿತಿದ್ದ ಸಂದರ್ಭದಲ್ಲಿ ಜಗಳ ಪ್ರಾರಂಭವಾಗಿದೆ. ಈ ಜಗಳ ವಿಕೋಪಕ್ಕೆ ತಿರುಗಿ ನಟರಾಜ್ ಕಬ್ಬಿಣದ ರಾಡಿನಿಂದ ರಾಮಾಂಜಿನಪ್ಪನ ತಲೆಗೆ ಬಲವಾಗಿ ಹೊಡೆದಿದ್ದಾನೆ. ಪರಿಣಾಮ ರಾಮಾಂಜಿನಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.