ಗುರುವಾರ , ಜುಲೈ 29, 2021
26 °C

ಕಾರ್ಪೆಂಟರ್ ಕಗ್ಗೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದುಷ್ಕರ್ಮಿಗಳು ವ್ಯಕ್ತಿಯೊಬ್ಬರ ತಲೆಗೆ ಬಲವಾದ ಆಯುಧದಿಂದ ಹೊಡೆದು ಕೊಲೆ ಮಾಡಿದ ಘಟನೆ ಕಾಮಾಕ್ಷಿಪಾಳ್ಯ ಸಮೀಪದ ಸುಮನಹಳ್ಳಿ ಜಂಕ್ಷನ್‌ನಲ್ಲಿ ನಡೆದಿದೆ.ವಿಜಯನಗರದ ಮೂಡಲಪಾಳ್ಯ ನಿವಾಸಿ ಬಸವರಾಜು (48) ಕೊಲೆಯಾದವರು. ಕಾರ್ಪೆಂಟರ್ ಆಗಿದ್ದ ಅವರು ಬ್ಯಾಡರಹಳ್ಳಿಯಲ್ಲಿ ಕೆಲಸ ಮಾಡುತ್ತಿದ್ದರು. ಮೂಲತಃ ಹಾವೇರಿಯ ಬಸವರಾಜು ಅವರು ಕೆಲ ವರ್ಷಗಳಿಂದ ನಗರದಲ್ಲಿ ನೆಲೆಸಿದ್ದರು. ವಿವಾಹಿತರಾಗಿದ್ದ ಅವರಿಗೆ ಮೂವರು ಮಕ್ಕಳಿದ್ದಾರೆ. ಶನಿವಾರ ಕೆಲಸಕ್ಕೆ ಹೋಗಿದ್ದ ಅವರು ಮನೆಗೆ ವಾಪಸಾಗಿರಲಿಲ್ಲ. ಇದರಿಂದ ಆತಂಕಗೊಂಡ ಕುಟುಂಬ ಸದಸ್ಯರು ಅವರನ್ನು ಹುಡುಕಲು ಯತ್ನಿಸಿದ್ದರು. ಸೋಮವಾರ ಬೆಳಿಗ್ಗೆ ಸುಮನಹಳ್ಳಿ ಜಂಕ್ಷನ್‌ನಲ್ಲಿ ಬಸವರಾಜು ಅವರ ಶವ ಪತ್ತೆಯಾಯಿತು. ಅವರನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಮೊಬೈಲ್ ದೋಚಿ ಪರಾರಿಯಾಗಿದ್ದಾರೆ. ಕೊಲೆಗೆ ಕಾರಣ ಗೊತ್ತಾಗಿಲ್ಲ. ದರೋಡೆ ಮಾಡುವ ಉದ್ದೇಶದಿಂದ ಕೊಲೆ ಮಾಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಅರ್ಧ ಕೆ.ಜಿ ಚಿನ್ನಾಭರಣ ಕಳವು

ಮನೆಯ ಬಾಗಿಲು ಮುರಿದ ದುಷ್ಕರ್ಮಿಗಳು 533 ಗ್ರಾಂ ಚಿನ್ನಾಭರಣ ಮತ್ತು 1.40 ಲಕ್ಷ ನಗದು ಕಳವು ಮಾಡಿದ ಘಟನೆ ಕಬ್ಬನ್‌ಪೇಟೆಯ ಆಂಜನೇಯ ದೇವಸ್ಥಾನ ರಸ್ತೆಯಲ್ಲಿ ಭಾನುವಾರ ನಡೆದಿದೆ.ನಟರಾಜ್ ಚಾರಿ ಎಂಬುವರ ಮನೆಯಲ್ಲಿ ಕಳವು ನಡೆದಿದೆ. ಅವರು ರಾತ್ರಿ ಎಂಟು ಗಂಟೆ ಸುಮಾರಿಗೆ ಮನೆಗೆ ಬೀಗ ಹಾಕಿ ಹೊರಗೆ ಹೋಗಿದ್ದಾಗ ದುಷ್ಕರ್ಮಿಗಳು ಬಾಗಿಲು ಮುರಿದು ಒಳ ನುಗ್ಗಿ ಈ ಕೃತ್ಯ ಎಸಗಿದ್ದಾರೆ.ನಟರಾಜ್ ಅವರು ರಾತ್ರಿ ಹನ್ನೊಂದು ಗಂಟೆ ಸುಮಾರಿಗೆ ಮನೆಗೆ ಬಂದಾಗ ಕಳವಾಗಿದ್ದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಲಸೂರುಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಹೆಣ್ಣೂರು: ಮನೆಯ ಬೀಗ ಒಡೆದ ಕಿಡಿಗೇಡಿಗಳು ಚಿನ್ನಾಭರಣ, ನಗದು ಮತ್ತು ಕ್ರೆಡಿಟ್ ಕಾರ್ಡ್ ಕಳವು ಮಾಡಿದ ಘಟನೆ ಹೆಣ್ಣೂರಿನ ಬಾಬುಸಾಬ್‌ಪಾಳ್ಯದಲ್ಲಿ ಭಾನುವಾರ ನಡೆದಿದೆ.ಮನೆಯ ಮಾಲೀಕ ಹ್ಯಾರಿ ಪೆರಿಯೋ ಅವರು ದೂರು ನೀಡಿದ್ದಾರೆ. ರಾತ್ರಿ ಏಳು ಗಂಟೆ ಸುಮಾರಿಗೆ ಅವರು ಔಷಧ ಅಂಗಡಿಗೆ ಹೋಗಿದ್ದ ಸಂದರ್ಭದಲ್ಲಿ ಕಳವು ನಡೆದಿದೆ. ಹೆಣ್ಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.