ಕಾರ್ಮಿಕರಿಗೆ ಆರೋಗ್ಯ ಕಿಟ್
ಕೃಷ್ಣರಾಜಪುರ: ಇಲ್ಲಿನ ವಾರ್ಡ್ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಪಾಲಿಕೆ ಸದಸ್ಯ ಎನ್.ವೀರಣ್ಣ ಅವರು ಪೌರಕಾರ್ಮಿಕರಿಗೆ ಆರೋಗ್ಯ ಕಿಟ್ ಅರ್ಹ ಫಲಾನುಭವಿಗಳಿಗೆ ಇಸ್ತ್ರಿ ಪೆಟ್ಟಿಗೆ, ತಕ್ಕಡಿ, ಮೂರು ಚಕ್ರದ ಸೈಕಲ್, ಬಕೆಟುಗಳನ್ನು ವಿತರಿಸಿದರು.
ನಂತರ ಮಾತನಾಡಿದ ವೀರಣ್ಣ, ಶೇಕಡಾ 22.72 ಅಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಸವಲತ್ತು ವಿತರಿಸಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಬಿಬಿಎಂಪಿ ಮತ್ತು `ಸ್ಟೆಪ್ಸ್~ ಸ್ವಯಂ ಸೇವಾ ಸಂಸ್ಥೆಯಿಂದ ಬಸವನಪುರದಲ್ಲಿ ಹಿರಿಯರಿಗೆ ಗುರುತಿನ ಚೀಟಿ ವಿತರಿಸಲಾಯಿತು.
ಬಿಬಿಎಂಪಿ ಸಮಾಜ ಕಲ್ಯಾಣ ಅಧಿಕಾರಿ ಶಿವಕುಮಾರ್, ಬ್ರಹ್ಮಾನಂದ, ಪರಿಸರ ಎಂಜಿನಿಯರ್ ಮಂಜುನಾಥ್, ಆರೋಗ್ಯ ಇನ್ಸ್ಪೆಕ್ಟರ್ ಮುಕುಂದ, ದಿವಾಕರ್, ಚಂದ್ರಶೇಖರ್, ಮಂಜುನಾಥ ರೆಡ್ಡಿ ಭಾಗವಹಿಸಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.