ಸೋಮವಾರ, ಜೂನ್ 21, 2021
28 °C

ಕಾರ್ಮಿಕರಿಗೆ ಶಾಶ್ವತ ವಸತಿ ಕಲ್ಪಿಸಲು ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ರಾಜ್ಯದಲ್ಲಿ ಅಸಂಘಟಿತ ವಲಯಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಶಾಶ್ವತ ವಸತಿ ವ್ಯವಸ್ಥೆಯನ್ನು ಕಲ್ಪಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ರಾಜ್ಯ ಅಸಂಘಟಿತ ಕಾರ್ಮಿಕರ ಒಕ್ಕೂಟದ ಕಾರ್ಯದರ್ಶಿ ಕವಿತಾ ಅವರು ಒತ್ತಾಯಿಸಿದರು.



ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಿದ್ಧ ಉಡುಪು ತಯಾರಿಕೆ, ಹೋಟೆಲ್‌, ಮನೆಗೆಲಸ ಸೇರಿದಂತೆ ಹಲವು ಅಸಂಘಟಿತ ವಲಯಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಇದರಲ್ಲಿ ಶೇ 90ರಷ್ಟು ಮಹಿಳಾ ಕಾರ್ಮಿಕರಿದ್ದಾರೆ.   ಬರುವ ಸಂಬಳದಲ್ಲಿ ಶೇ 50ರಷ್ಟು ಮನೆ ಬಾಡಿಗೆಗೆ ಖರ್ಚಾಗುತ್ತದೆ. ಇದರಿಂದ ಅವರ ಜೀವನ ನಿರ್ವಹಣೆ ಕಷ್ಟವಾಗುತ್ತಿದೆ  ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.