ಕೃಷ್ಣರಾಜಪುರ: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾವಿರಕ್ಕೂ ಹೆಚ್ಚು ದಿನಗೂಲಿ ಕಾರ್ಮಿಕರು ಭಾರತ ಆಹಾರ ನಿಗಮದ ಎದುರು ಎರಡು ವಾರಗಳಿಂದ ಧರಣಿ ನಡೆಸುತ್ತಿದ್ದು, ಸಂಸದರು ಮತ್ತು ಶಾಸಕರು ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.

ಸಂಸದ ಡಿ.ಬಿ.ಚಂದ್ರೇಗೌಡ ಮಾತನಾಡಿ, `ಇದೇ 24ರಂದು ಸಂಸತ್ತಿನ ಅಧಿವೇಶನದಲ್ಲಿ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರ ಗಮನ ಸೆಳೆದು ಚರ್ಚಿಸಲಾಗುವುದು. ಕಾರ್ಮಿಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಇತರ ಸಂಸದರ ಸಹಕಾರ ಪಡೆದು ಕೇಂದ್ರವನ್ನು ಒತ್ತಾಯಿಸಲಾಗುವುದು~ ಎಂದರು.

ಸಂಸದ ಪಿ.ಸಿ.ಮೋಹನ್, `ರಾಜ್ಯವ್ಯಾಪಿ ಒಂದು ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಧರಣಿ ನಡೆಸುತ್ತಿದ್ದಾರೆ. 18- 20ವರ್ಷಗಳಿಗಿಂತಲೂ ದಿನಗೂಲಿಯಾಗಿಯೇ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ಇತರರಿಗೆ ನೀಡುತ್ತಿರುವ ಸೌಲಭ್ಯಗಳನ್ನು ವಿಸ್ತರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು~ ಎಂದರು.

ಶಾಸಕ ಎನ್.ಎಸ್.ನಂದೀಶ ರೆಡ್ಡಿ ಮಾತನಾಡಿ, `ದಿನಗೂಲಿ ನೌಕರರಿಗೆ ವಾಜಪೇಯಿ `ಆರೋಗ್ಯಶ್ರೆ~ ಕಾರ್ಡುಗಳು ಮತ್ತು ಪಡಿತರ ಚೀಟಿ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು~ ಎಂದು ಆಶ್ವಾಸನೆ ನೀಡಿದರು.
ಪಾಲಿಕೆ ಸದಸ್ಯ ಸುಕುಮಾರ್, ಎಸ್.ಎಸ್.ಪ್ರಸಾದ್, ನಗರಸಭೆ ಮಾಜಿ ಸದಸ್ಯ ಬಾಕ್ಸರ್ ನಾಗರಾಜ್, ವಾಸುದೇವ ರೆಡ್ಡಿ, ಗೌರಮ್ಮ ಮತ್ತಿತರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.