ಸೋಮವಾರ, ಏಪ್ರಿಲ್ 19, 2021
23 °C

ಕಾರ್ಮಿಕರ ಬೇಡಿಕೆ: ನಾಳೆ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  `ಕಾರ್ಮಿಕ ವರ್ಗದ ಬೇಡಿಕೆಗಳ ಬಗ್ಗೆ ಮಂಗಳವಾರ (ಜು. 10) ಸಾಮೂಹಿಕ ಪ್ರದರ್ಶನಗಳ ಮೂಲಕ ಪ್ರತಿಭಟನೆ ನಡೆಸಲಾಗುವುದು~ ಎಂದು ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಎಚ್.ವಿ.ಅನಂತಸುಬ್ಬರಾವ್ ಹೇಳಿದರು.ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಬೆಲೆ ಏರಿಕೆ ಮುಗಿಲು ಮುಟ್ಟಿದೆ. ಆದರೆ, ಜನ ಸಾಮಾನ್ಯರ ಉಳಿವಿಗಾಗಿ ಸೂಕ್ತ ಕ್ರಮಗಳ ಮೂಲಕ ಬೆಲೆ ಏರಿಕೆಯನ್ನು ಸರ್ಕಾರ ತಡೆಗಟ್ಟಬೇಕು. ನಿಯಂತ್ರಿತ ಬೆಲೆಯಲ್ಲಿ ಎಲ್ಲರಿಗೂ ಅಗತ್ಯ ವಸ್ತುಗಳು ದೊರೆಯುವಂತೆ ಕ್ರಮ ಕೈಗೊಳ್ಳಬೇಕು~ ಎಂದರು.`ಗುತ್ತಿಗೆ ಹಾಗೂ ಹೊರಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಬೇಕು. ಹಂತ ಹಂತವಾಗಿ ಗುತ್ತಿಗೆ ಕಾರ್ಮಿಕರನ್ನು ಕಾಯಂಗೊಳಿಸಬೇಕು ಎಂದರು.ಗೋಷ್ಠಿಯಲ್ಲಿ ಕಾರ್ಯದರ್ಶಿಗಳಾದ  ಎಸ್.ನಾಗರಾಜು, ಡಿ.ಎ. ವಿಜಯ ಭಾಸ್ಕರ್, ಶಿವಣ್ಣ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.