ಶನಿವಾರ, ಮೇ 15, 2021
25 °C

ಕಾರ್ಮಿಕರ ಮಕ್ಕಳು ಶಾಲೆಗೆ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರವಾರ: ಕೂಲಿಗಾಗಿ ಊರೂರು ಅಲೆಯಬೇಕಾದ ಅನಿವಾರ್ಯತೆ, ಭಾಷೆ ಸಮಸ್ಯೆ ಹೀಗೆ ನಾನಾ ಕಾರಣಗಳಿಂದಾಗಿ ವಿದ್ಯಾಭ್ಯಾಸದಿಂದ ವಂಚಿತರಾಗಿದ್ದ ಕೂಲಿಕಾರ್ಮಿಕರ ಏಳು ಮಕ್ಕಳಿಗೆ ನಗರದ ಸುಂಕೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ದಾಖಲು ಮಾಡಿಕೊಳ್ಳಲಾಯಿತು.ಆಂಧ್ರಪ್ರದೇಶದ ಮೆಹಬೂಬನಗರ ಜಿಲ್ಲೆಯ ಗುಂಡಮ್ಮ ಗ್ರಾಮದ ಸುಮಾರು ಹತ್ತು ಕುಟುಂಬಗಳು ಇಲ್ಲಿ ನಿರ್ಮಾಣವಾಗುತ್ತಿರುವ ಸುಂಕೇರಿ-ಕಡವಾಡ ಸೇತುವೆ ನಿರ್ಮಾಣ ಕಂಪೆನಿಯಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ.ಕಾಮಗಾರಿ ನಡೆಯುವ ಸ್ಥಳದಲ್ಲಿ ಪಾಲಕರೊಂದಿಗೆ ಮಕ್ಕಳೂ ಇರುವುದನ್ನು ಗಮನಿಸಿದ ಸುಂಕೇರಿ ಶಾಲೆಯ ಶಿಕ್ಷಕರು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ವಿಷಯ ತಿಳಿಸಿದರು. ಸ್ಥಳಕ್ಕೆ ಆಗಮಿಸಿದ ಬಿಇಒ ಶ್ರೀಕಾಂತ ಹೆಗಡೆ ಸೇತುವೆ ನಿರ್ಮಾಣ ಕಂಪೆನಿಯ ಅಧಿಕಾರಿಗಳು ಮತ್ತು ಪಾಲಕರನ್ನು ಸಂಪರ್ಕಿಸಿ ಮಕ್ಕಳನ್ನು ಶಾಲೆಗೆ ಕಳುಹಿಸಿಕೊಡುವಂತೆ ಮನವಿ ಮಾಡಿದರು.ಬಿಇಒ ಮನವಿಗೆ ಒಪ್ಪಿದ ಪಾಲಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಆಸಕ್ತಿ ತೋರಿದರು. ಸ್ಥಳಕ್ಕೆ ಹೋಗಿದ್ದ ಬಿಇಒ ಹಾಗೂ ಶಿಕ್ಷಕರೊಂದಿಗೇ ಮಕ್ಕಳು ಶಾಲೆಗೆ ಆಗಮಿಸಿದರು.`ಸೇತುವೆ ನಿರ್ಮಾಣ ಕೆಲಸಕ್ಕೆ ಬಂದಿದ್ದ ಕೂಲಿಕಾರ್ಮಿಕರ ಏಳು ಮಕ್ಕಳ ಪಾಲಕರನ್ನು ಭೇಟಿ ಮಾಡಿ ಅವರ ಮನವೊಲಿಸಿ ಶಾಲೆಗೆ ದಾಖಲಾತಿ ಮಾಡಿಕೊಳ್ಳಲಾಗಿದೆ. ಅವರಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ ಸೇರಿದಂತೆ ಶಿಕ್ಷಣಕ್ಕೆ ಅಗತ್ಯವಿರುವ ಎಲ್ಲ ನೆರವು ಒದಗಿಸಲಾಗುವುದು' ಎಂದು ಬಿಇಒ ಶ್ರೀಕಾಂತ ಹೆಗಡೆ `ಪ್ರಜಾವಾಣಿ'ಗೆ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.