ಶನಿವಾರ, ಜುಲೈ 24, 2021
26 °C
ರಸ್ತೆ ಅಭಿವೃದ್ಧಿಗೆ ಆದ್ಯತೆ, ತುಂಬಿಗೆರೆಗೆ ರೂ 3 ಲಕ್ಷ; ಸಿದ್ದೇಶ್ವರ

ಕಾರ್ಮಿಕರ ಸಮುದಾಯ ಭವನಕ್ಕೆ ನೆರವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಹರಿಹರದ ಹರಿಹರೇಶ್ವರ ಕಟ್ಟಡ ಕಾರ್ಮಿಕರ ಸಂಘದ ಸಮುದಾಯ ಭವನಕ್ಕೆ ಅನುದಾನ ನೀಡುವುದಾಗಿ ಸಂಸತ್ ಸದಸ್ಯ ಜಿ.ಎಂ.ಸಿದ್ದೇಶ್ವರ ಭರವಸೆ ನೀಡಿದರು.ಸಂಸತ್ ಸದಸ್ಯರ ಜನ ಸಂಪರ್ಕ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯ ವೇಳೆ ಕಟ್ಟಡ ಕಾರ್ಮಿಕ ಸಂಘದವರು ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿರೂ 2 ಲಕ್ಷ ಅನುದಾನ ನೀಡುವುದಾಗಿ ಅವರು ಭರವಸೆ ನೀಡಿದರು.ಚನ್ನಗಿರಿ ತಾಲ್ಲೂಕಿನ ಮೆದಿಕೆರೆ ಗ್ರಾಮದಲ್ಲಿ ನಿರ್ಮಾಣ ಆಗುತ್ತಿರುವ ಮಲ್ಲೇಶ್ವರ ದೇವಸ್ಥಾನಕ್ಕೆ ಈಗಾಗಲೇರೂ 40 ಲಕ್ಷ ವೆಚ್ಚವಾಗಿದೆ. ದೇವಸ್ಥಾನ ಕಾರ್ಯಕ್ಕೆ ಸಾಕಷ್ಟು ಅನುದಾನದ ಅಗತ್ಯವಿದೆ. ಆದ್ದರಿಂದ, ಮುಜರಾಯಿ ಇಲಾಖೆಯಿಂದ ಅನುದಾನ ದೊರಕಿಸಿಕೊಡುವಂತೆ ಗ್ರಾಮಸ್ಥರು ಇದೇ ವೇಳೆ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ, ಮುಜರಾಯಿ ಮಂತ್ರಿಗಳಿಗೆ ಶಿಫಾರಸು ಮಾಡಿ ಅನುದಾನ ದೊರಕಿಸಿಕೊಡಲು ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.ಹರಿಹರ ತಾಲ್ಲೂಕಿನ ಹೊಸಹಳ್ಳಿಯಿಂದ ಹರಗನ ಹಳ್ಳಿಯವರೆಗೆ 5 ಕಿ.ಮೀ. ರಸ್ತೆ ಹಾಳಾಗಿದೆ. ಅದಕ್ಕೆ ಅನುದಾನ ನೀಡಲಾಗುವುದು. ಕೇಂದ್ರ ಸರ್ಕಾರ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಅನುದಾನ ನೀಡುವುದಾಗಿ ಹೇಳಿದೆ. ಅನುದಾನ ಬಿಡುಗಡೆ ಆದ ಕೂಡಲೇ ಆ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಭರವಸೆ ನೀಡಿದರು.ದಾವಣಗೆರೆ ತಾಲ್ಲೂಕಿನ ತುಂಬಿಗೆರೆ ಗ್ರಾಮಕ್ಕೆ ಈಗಾಗಲೇರೂ 3 ಲಕ್ಷ ನೀಡಲು ವಾಗ್ದಾನ ಮಾಡಿದ್ದೇನೆ. ಗ್ರಾಮಸ್ಥರು ಯಾವ ಕಾಮಗಾರಿಗೆ ಅನುದಾನ ಬೇಕು ಎಂಬುದನ್ನು ನಿರ್ಧರಿಸಿದರೆ ಅನುದಾನ ಬಿಡುಗಡೆ ಮಾಡಿಕೊಡಲಾಗುವುದು ಎಂದು ಹೇಳಿದರು.ಬಾತಿ ಚಂದ್ರಶೇಖರ್, ಕೊಂಡಜ್ಜಿ ಜಯಪ್ರಕಾಶ್, ಯಶವಂತರಾವ್ ಜಾದವ್, ರಮೇಶ ನಾಯ್ಕ, `ದೂಡಾ' ಮಾಜಿ ಸದಸ್ಯ ಕೊಟ್ರೇಶ್ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.