ಕಾರ್ಮಿಕ ಸಂಘಟನೆ ಮುಷ್ಕರ

7

ಕಾರ್ಮಿಕ ಸಂಘಟನೆ ಮುಷ್ಕರ

Published:
Updated:

ಮಾನ್ವಿ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಬುಧವಾರ ಕೇಂದ್ರೀಯ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ ತಾಲ್ಲೂಕು ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಸಿಐಟಿಯು, ಎಐಟಿಯುಸಿ, ಗ್ರಾಮ ಪಂಚಾಯಿತಿ ನೌಕರರ ಸಂಘ, ಅಂಗನವಾಡಿ ಕಾರ್ಯಕರ್ತೆಯರ ಫೆಡರೇಶನ್, ಕಟ್ಟಡ ಕಾರ್ಮಿಕರ ಸಂಘ, ಜೀವವಿಮಾ ನೌಕರರ ಂಘ, ಬಿಎಸ್ಸೆನ್ನೆಲ್ ಗುತ್ತಿಗೆ ನೌಕರರ ಸಂಘ, ಎತ್ತು ಬಂಡಿ ಹಮಾಲರ ಸಂಘ ಮತ್ತಿತರ ಸಂಘಟನೆಗಳ ಸದಸ್ಯರು ಪಟ್ಟಣದ ಬಸವ ವೃತ್ತದಲ್ಲಿ ಪ್ರತಿಭಟನೆ ನಡೆಸಿ ರಸ್ತೆ ತಡೆಗೆ ಚಳವಳಿಗೆ ಯತ್ನಿಸಿದರು. ಈ ಸಂದರ್ಭದಲ್ಲಿ ಕಾರ್ಮಿಕ ಸಂಘಟನೆಗಳ ಮುಖಂಡರಾ ದ ಎಚ್.ಶರ್ಪುದ್ದೀನ್ ಪೋತ್ನಾಳ, ಶಾಂತಮ್ಮ ಸೀಕಲ್, ಈರಣ್ಣ ಅರೋಲಿ, ಸಿದ್ದಲಿಂಗಯ್ಯ ಮತ್ತಿತರರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು.ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು. ಉದ್ಯೋಗ ಸೃಷ್ಟಿಗೆ ಕ್ರಮ ಕೈಗೊಳ್ಳಬೇಕು. ಕಾರ್ಮಿಕ ಕಾನೂನುಗಳ

ಜಾರಿಗೆ ಕಠಿಣ ಕ್ರಮ ಕೈಗೊಳ್ಳಬೇಕು. ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆ ನಿಧಿ ಜಾರಿಗೊಳಿಸಬೇಕು. ಕೇಂದ್ರ ಹಾಗೂ ರಾಜ್ಯಗಳ ಸಾರ್ವಜನಿಕ ಉದ್ದಿಮೆಗಳಲ್ಲಿ ಬಂಡವಾಳ ಹಿಂತೆಗೆತವನ್ನು ನಿಲ್ಲಿಸಬೇಕು ಎಂದು  ಪ್ರತಿಭಟನಾಕಾರರು ಆಗ್ರಹಿಸಿದರು.ಪ್ರತಿಭಟನಾನಿರತರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು. ವಿವಿಧ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳಾದ ಎಂ.ಬಿ.ಸಿದ್ರಾಮಯ್ಯ ಸ್ವಾಮಿ, ಡಿ.ಮಲ್ಲಿಕಾರ್ಜುನ, ಪ್ರದೀಪಕುಮಾರ, ಬನ್ನಪ್ಪ, ರುದ್ರಪ್ಪ ನಾಯಕ, ಬಸವರಾಜ, ರಾಮಲಿಂಗಪ್ಪ, ಧುರೇಂದ್ರ, ಸುಚೀಂದ್ರ, ಕಾಳಮ್ಮ, ಮಲ್ಲಿಕಾರ್ಜುನ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry