ಮಂಗಳವಾರ, ಜೂನ್ 22, 2021
29 °C

ಕಾರ್ಯಕರ್ತರ ಜಟಾಪಟಿ: ಕೇಜ್ರಿವಾಲ್ ಕ್ಷಮೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭುಜ್ (ಪಿಟಿಐ):  ಗುಜರಾತಿನಲ್ಲಿ ಬುಧವಾರ ನಡೆದ ಎಎಪಿ (ಆಮ್ ಆದ್ಮಿ ಪಕ್ಷ) ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಘರ್ಷಣೆಯ ಬಗ್ಗೆ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯೆ ನೀಡಿದ್ದು, ಕಾರ್ಯಕರ್ತರ ವರ್ತನೆ ಬಗ್ಗೆ ಬಹಿರಂಗ ಕ್ಷಮೆ ಕೋರಿದ್ದಾರೆ.ಬುಧವಾರ ಗುಜರಾತ್ ಗೆ ಭೇಟಿ ನೀಡಿದ್ದ ಕೇಜ್ರಿವಾಲರನ್ನು ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದರು. ಇದರಿಂದ ಆಕ್ರೋಶಗೊಂಡ ಆಪ್ ಕಾರ್ಯಕರ್ತರು ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದರು. ನಂತರ ಬಿಜೆಪಿ ಮತ್ತು ಎಎಪಿ ಕಾರ್ಯಕರ್ತರ ಮಧ್ಯೆ ಘರ್ಷಣೆ ನಡೆದಿತ್ತು. ಘಟನೆಗೆ ಸಂಬಂಧಿಸಿದಂತೆ 14 ಆಪ್ ಕಾರ್ಯಕರ್ತರ ವಿರುದ್ಧ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.ಘಟನೆ ವೇಳೆ ಉಭಯ ಪಕ್ಷಗಳ 28 ಕಾರ್ಯಕರ್ತರು ಗಾಯಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.