ಭಾನುವಾರ, ಜೂನ್ 13, 2021
25 °C

ಕಾರ್ಯನಿರತ ಪತ್ರಕರ್ತರ ಸಂಘದ ಖಂಡನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರು ನ್ಯಾಯಾಲಯದ ಆವರಣದಲ್ಲಿ ಪತ್ರಕರ್ತರ ಮೇಲೆ ವಕೀಲರಿಂದ ನಡೆದ ಹಲ್ಲೆ ಘಟನೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸಿದೆ.ಪತ್ರಕರ್ತರನ್ನು ಗುರಿಯನ್ನಾಗಿಸಿಕೊಂಡು, ಅದರಲ್ಲೂ ಟಿವಿ ಮಾಧ್ಯಮದ ಕ್ಯಾಮರಾಮನ್, ವರದಿಗಾರರುಗಳನ್ನು ಗುರಿಯಾಗಿಸಿ ಹಲ್ಲೆ ನಡೆಸಿರುವುದು ಪೂರ್ವಯೋಜಿತ ಸಂಚಿನಂತೆ ತೋರುತ್ತಿದ್ದು, ಪುಂಡಾಟಿಕೆ ನಡೆಸಿದವರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಂಘ ಒತ್ತಾಯಿಸಿದೆ.ಹಲ್ಲೆ ಘಟನೆ  ಖಂಡಿಸಿ ಸೋಮವಾರ (ಮಾ.5) ರಂದು ಬೆಂಗಳೂರಿನಲ್ಲಿ ರಾಜಭವನ ಜಾಥಾ ಕಾರ್ಯಕ್ರಮವನ್ನು ನಡೆಸಲಾಗುವುದು, ಪತ್ರಕರ್ತರಿಗೆ ರಕ್ಷಣೆ ಕೋರಿ ಮನವಿ ಸಲ್ಲಿಸಲಾಗುವುದು ಅಂದು ರಾಜ್ಯದ ಎಲ್ಲ ಜಿಲ್ಲೆಗಳಿಂದ ಆಗಮಿಸುವ ಎರಡು ಸಾವಿರ ಕಾರ್ಯನಿರತ ಪತ್ರಕರ್ತರು  ಮಹಾತ್ಮಗಾಂಧಿ ಪ್ರತಿಮೆ ಮುಂಭಾಗದಿಂದ ಕಪ್ಪು ಪಟ್ಟಿ ಧರಿಸಿ ಮೌನ ಮೆರವಣಿಗೆ ನಡೆಸಲಿದ್ದಾರೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಂಗಾಧರ ಮೊದಲಿಯಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಪ್ರೆಸ್‌ಕ್ಲಬ್ ಅಧ್ಯಕ್ಷ್ಯ ಎಂ.ಎ.ಪೊನ್ನಪ್ಪ, ವರದಿಗಾರರ ಕೂಟದ ಅಧ್ಯಕ್ಷ್ಯ ಕೆ.ವಿ ಪ್ರಭಾಕರ್ ಹಾಗೂ  ಮುಂಬೈ ಪತ್ರಕರ್ತರು ಘಟನೆಯನ್ನು ಖಂಡಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.