ಮಂಗಳವಾರ, ಮೇ 11, 2021
25 °C

ಕಾರ್ ಡಿಕ್ಕಿ: ಐವರು ಮಹಿಳೆಯರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಟ್ನಾ (ಐಎಎನ್‌ಎಸ್): ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಮೃತಪಟ್ಟು, ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡ ಘಟನೆ ಇಲ್ಲಿ ನಡೆದಿದೆ. 

 

ಪಟ್ನಾದ ಅಜಿಮ್‌ಚಕ್ ಪ್ರದೇಶದ ಹತ್ತಿರದ ಗೌರಿಚಕ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಈ ಎಲ್ಲರೂ ಜೆಹನಾಬಾದ್ ಜಿಲ್ಲೆಯವರೆಂದು ಹಿರಿಯ ಪೊಲೀಸ್ ಅಧಿಕಾರಿ ಮನು ಮಹಾರಾಜ್ ತಿಳಿಸಿದ್ದಾರೆ.ಚಾಲಕ ಸೇರಿದಂತೆ ಕಾರಿನಲ್ಲಿದ್ದ ಇಬ್ಬರು ಕಾರನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಘಟನೆಯಿಂದ ಸಿಟ್ಟಿಗೆದ್ದ ನೂರಾರು ಜನರು ಹೆದ್ದಾರಿಯಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.