ಬೆಂಗಳೂರು: ಅಪೂರ್ಣಗೊಂಡಿರುವ ರಸ್ತೆ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಹಾಗೂ ಡಾಂಬರೀಕರಣ ಕಾಮಗಾರಿಗಳನ್ನು ಡಿಸೆಂಬರ್ ಒಳಗೆ ಮುಗಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಜಗದೀಶ ಶೆಟ್ಟರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈಚೆಗೆ ನಡೆದ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಕಾಮಗಾರಿಗಳಲ್ಲಿ ಗುಣಮಟ್ಟವನ್ನು ಕಾಪಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಅಮಿತಾ ಪ್ರಸಾದ್ ಮಾತನಾಡಿ, `ನಮ್ಮ ಗ್ರಾಮ ನಮ್ಮ ರಸ್ತೆ~ ಯೋಜನೆಯ ಗುಣಮಟ್ಟ ನಿಯಂತ್ರಣಕ್ಕಾಗಿ ಜಿಲ್ಲಾ ಮಟ್ಟದಲ್ಲಿ 16 ಮಂದಿ ನಿವೃತ್ತ ಮುಖ್ಯ ಎಂಜಿನಿಯರ್ ಮತ್ತು ಸೂಪರಿಂಟೆಂಡಿಂಗ್ ಎಂಜಿನಿಯರ್ಗಳನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ 2011-12ನೇ ಸಾಲಿನ ಯೋಜನೆಗಳ ಅನುಷ್ಠಾನಕ್ಕೆ ಕರೆದಿರುವ ಟೆಂಡರ್ಗಳಿಗೆ ಒಪ್ಪಿಗೆ ನೀಡಲಾಯಿತು.

ಗ್ರಾಮ ಸಡಕ್ ಯೋಜನೆ ಕಾಮಗಾರಿಗಳ ಗುಣಮಟ್ಟದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಈ ವರ್ಷ ಮೊದಲನೇ ಸ್ಥಾನ ಪಡೆಯಲು ಕ್ರಮ ಕೈಗೊಳ್ಳಲಾಗಿದೆ. ಇದಕ್ಕೆ ಎಲ್ಲರ ಸಹಕಾರ ಅತ್ಯಗತ್ಯ ಎಂದು ಇಲಾಖೆಯ ಕಾರ್ಯದರ್ಶಿ ಶಾಲಿನಿ ರಜನೀಶ್ ತಿಳಿಸಿದರು. ಸಂಸ್ಥೆಯ ಪ್ರಗತಿ ಮತ್ತು ವಾರ್ಷಿಕ ಯೋಜನೆಯ ಮುನ್ನೋಟವನ್ನು ಸಚಿವ ಶೆಟ್ಟರ್ ಬಿಡುಗಡೆ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.