ಮಂಗಳವಾರ, ಜೂನ್ 22, 2021
27 °C

ಕಾಲೇಜುಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಧಾರವಾಡ: ಧಾರ್ಮಿಕ ಹಾಗೂ ಭಾಷಾ ಅಲ್ಪಸಂಖ್ಯಾ ತರಿಗೆ ಮೀಸಲಾದ ವೈದ್ಯಕೀಯ ಸೀಟುಗಳನ್ನು ಅಕ್ರಮವಾಗಿ ಮಾರಿಕೊಂಡ ಧಾರ್ಮಿಕ, ಭಾಷಾ ಅಲ್ಪಸಂಖ್ಯಾತ ಕಾಲೇಜುಗಳ ವಿರುದ್ಧ ಕ್ರಮ ಕೈಗೊ ಳ್ಳಬೇಕು ಎಂದು ಒತ್ತಾಯಿಸಿ ಎಬಿವಿಪಿ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿ ಕಾರಿಗಳಿಗೆ ಮನವಿ ಸಲ್ಲಿಸಿದರು.ಈ ಕಾಲೇಜುಗಳು ಭಾರತೀಯ ವೈದ್ಯಕೀಯ ಪರಿಷತ್ತು, ರಾಷ್ಟ್ರೀಯ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಆಯೋಗದ ಷರತ್ತುಗಳನ್ನು ಉಲ್ಲಂಘಿಸಿವೆ. ಈ ಷರತ್ತುಗಳ ಅನ್ವಯ ಸ್ಥಳೀಯವಾಗಿ ಭಾಷಾ ಹಾಗೂ ಧಾರ್ಮಿಕ ಅಲ್ಪಸಂಖ್ಯಾತ ಜನಾಂಗದ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ನಿರ್ದಿಷ್ಟ ಸೀಟುಗಳನ್ನು ಮೀಸಲಿಡ ಲಾಗಿದೆ.ಈ ಸೀಟುಗಳನ್ನು ಯಾವುದೇ ಕಾರಣಕ್ಕೂ ಇತರೆ ವಿದ್ಯಾರ್ಥಿಗಳಿಗೆ ಮಾರಾಟ ಮಾಡುವಂತಿಲ್ಲ. ಆದರೆ, ಸರ್ಕಾರಿ ಮತ್ತು ಖಾಸಗಿ ಸೀಟು ಹಂಚಿಕೆ ಸಂದರ್ಭದಲ್ಲಿ ಹೆಚ್ಚುವರಿಯಾಗಿ ಸೀಟುಗಳನ್ನು ಪಡೆದಿರುವ ಬಹುತೇಕ ಎಲ್ಲಾ ಭಾಷಾ, ಧಾರ್ಮಿಕ ಅಲ್ಪಸಂಖ್ಯಾತ ಕಾಲೇಜುಗಳು ಸೀಟುಗಳನ್ನು ಅಕ್ರಮವಾಗಿ ಮಾರಿಕೊಳ್ಳುವ ಮೂಲಕ ರಾಜ್ಯದ ಬಡ ವಿದ್ಯಾರ್ಥಿಗಳಿಗೆ ಮೋಸ ಮಾಡಿದಂತಾಗಿದೆ ಎಂದು ಪ್ರತಿಭಟನಾಕಾರರು ಟೀಕಿಸಿದರು.ಶಿಕ್ಷಣ ಸಂಸ್ಥೆಗಳ ಒತ್ತಡಕ್ಕೆ ಮಣಿಯದೇ, ಕೂಡಲೇ ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯ ವರನ್ನು ಕಡ್ಡಾಯ ರಜೆಯಿಂದ ವಾಪಸ್‌ ಕರೆಸಿಕೊಳ್ಳಬೇಕು. ಅವರ ನೇತೃತ್ವದಲ್ಲಿ ಸಮಿತಿ ರಚಿಸಿ ಹಗರಣವನ್ನು ಬಯಲಿಗೆಳೆಯಬೇಕು. ಸಿಐಡಿ ತನಿಖೆ ಗೂ ಆದೇಶ ನೀಡಬೇಕು. ಸೀಟು ಹಗರಣದಲ್ಲಿ ಭಾಗಿಯಾದ ಕಾಲೇಜುಗಳ ಅನುಮತಿಯನ್ನು ರದ್ದು ಗೊಳಿಸಬೇಕು.ಪ್ರತಿ ಸೀಟಿನ ಹತ್ತು ಪಟ್ಟು ದಂಡವನ್ನು ಆಡಳಿತ ಮಂಡಳಿಗಳಿಂದ ವಸೂಲಿ ಮಾಡಬೇಕು ಎಂದು ಮುಖಂಡರಾದ ಮಹೇಶ ಹೆಂಬ್ಲಿ, ನಾಗರಾಜ, ವಿನಾಯಕ, ಕಲ್ಮೇಶ, ರವಿ, ಸಂತೋಷ, ಮುತ್ತು ಹಾಗೂ ತಮ್ಮಣ್ಣ ಒತ್ತಾಯಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.