ಕಾಲೇಜು ಆವರಣದಲ್ಲಿ ಶೌಚಾಲಯ

7

ಕಾಲೇಜು ಆವರಣದಲ್ಲಿ ಶೌಚಾಲಯ

Published:
Updated:

ಯಲಬುರ್ಗಾ: ಸ್ಥಳೀಯ ಸರ್ಕಾರಿ ಕಾಲೇಜು ಆವರಣದಲ್ಲಿ ಆರ್‌ಎಸ್‌ಎಸ್ ಸಂಘಟನೆಗೆ ಸಾಮೂಹಿಕ ಶೌಚಾಲಯ ನಿರ್ಮಿಸಿಕೊಡುತ್ತಿರುವ ಸ್ಥಳೀಯ ಶಿಕ್ಷಣ ಇಲಾಖೆ, ಪಟ್ಟಣ ಪಂಚಾಯಿತಿ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಪದಾಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಶನಿವಾರ ಎಸ್‌ಎಫ್‌ಐ ಸಂಘಟನೆ ಪ್ರತಿಭಟನೆ ನಡೆಸಿತು.ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಎದುರು ಧರಣಿ ನಡೆಸಿದ ಎಸ್‌ಎಫ್‌ಐ ಸಂಘಟನೆಯ ಪದಾಧಿಕಾರಿಗಳು ಶಾಲಾ ಕಾಲೇಜುಗಳ ಆವರಣದಲ್ಲಿಯೇ ಶೌಚಾಲಯ ನಿರ್ಮಿಸುವುದು ಸ್ಥಳೀಯ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ ದುರಾಡಳಿತಕ್ಕೆ ಸಾಕ್ಷಿಯಾಗಿದೆ.ಮೇಲಧಿಕಾರಿಗಳು ಇವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ರಾಷ್ಟ್ರೀಯ ಸೇವಾ ಸಂಘದ ಕಾರ್ಯ ಚಟುವಟಿಕೆಗಾಗಿ ಶಾಲೆಯನ್ನು ಬಿಟ್ಟು ಕೊಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಯವರು ಆರ್‌ಎಸ್‌ಎಸ್ ಸಂಘಟನೆ ಪರವಾಗಿ ಕಾರ್ಯನಿರ್ವಹಿಸುವಂತೆ ಸಂಶಯ ಮೂಡುತ್ತಿದೆ. ಇದರ ವಿರುದ್ಧ ತಾಲ್ಲೂಕಿನ ವಿವಿಧ ಸಂಘಟನೆಗಳು ಧ್ವನಿ ಎತ್ತುವುದರ ಜೊತೆಗೆ ಮಕ್ಕಳ ಹಿತ ಮತ್ತು ಶಾಲೆಯ ಪಾವಿತ್ರತೆಯನ್ನು ಕಾಪಾಡಬೇಕಾಗಿದೆ ಎಂದು ಜಿಲ್ಲಾ ಉಪಾಧ್ಯಕ್ಷ ಹನಮಂತ ಭಜಂತ್ರಿ ತಿಳಿಸಿದ್ದಾರೆ.ಶೌಚಾಲಯ, ಕುಡಿಯುವ ನೀರು ಹಾಗೂ ಇನ್ನಿತರ ಸೌಲಭ್ಯಗಳನ್ನು ಕಲ್ಪಿಸಿಕೊಡುವಂತೆ ಸುಮಾರು ವರ್ಷಗಳಿಂದಲೂ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿ ಸಂಘಟನೆಗಳ ಹೋರಾಟಕ್ಕೆ ಸ್ಪಂದಿಸದ ಕಾಲೇಜು ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆರ್‌ಎಸ್‌ಎಸ್ ಸಂಘಟನೆಯ ವಾರದ ಕಾರ್ಯಕ್ರಮಕ್ಕಾಗಿ ಶಾಲೆಯ ಕೊಠಡಿಗಳನ್ನು ಬಿಟ್ಟುಕೊಡುವುದರ ಜೊತೆಗೆ ತಾತ್ಕಾಲಿಕವಾಗಿ ಸಾಮೂಹಿಕ ಶೌಚಾಲಯವನ್ನು ಶಾಲಾ ಆವರಣದಲ್ಲಿಯೇ ನಿರ್ಮಿಸಿಕೊಡುವುದು ಸರಿಯಾದ ಕ್ರಮವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಸಿದ್ದಾರೆ,ಸ್ಥಳೀಯ ಪಟ್ಟಣ ಪಂಚಾಯಿತಿಯವರು ಸ್ವಂತ ಜಾಗದಲ್ಲಿ ಶೌಚಾಲಯ ನಿರ್ಮಾಣ ಮಾಡಿಕೊಳ್ಳುವುದಕ್ಕೆ ಹತ್ತಾರು ಸಲ ತಿರುಗಾಡಿಸಿ, ಅನಗತ್ಯ ಕಾಗದ ಪತ್ರಗಳನ್ನು ಪಡೆದು ಕೊನೆಗೆ ಶೌಚಾಲಯಕ್ಕೆ ಪರವಾನಿಗೆ ಕೊಡುವ ಮುಖ್ಯಾಧಿಕಾರಿಗಳು, ಶಾಲಾ ಆವರಣದಲ್ಲಿ ಸಾಕಷ್ಟು ಸಂಖ್ಯೆಯ ಶೌಚಾಲಯಗಳಿಗೆ ಅವಕಾಶ ಕೊಟ್ಟಿದ್ದಾರೂ ಯಾವ ಆಧಾರದಲ್ಲಿ ಈ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕಾಗಿದೆ.ಕ್ಷೇತ್ರದ ಶಾಸಕರು ಈ ಬಗ್ಗೆ ಸ್ಪಷ್ಟ ನಿರ್ಣಯ ಕೈಗೊಳ್ಳದೇ ಹೋದರೆ ವಿವಿಧ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಸ್‌ಎಫ್‌ಐ ಸಂಘಟನೆ ಎಚ್ಚರಿಸಿದೆ. ಸಂಘಟನೆಯ ಪದಾಧಿಕಾರಿಗಳಾದ ಜಗದೀಶ ಪೊಲೀಸ್‌ಪಾಟೀಲ, ಮಲ್ಲು ಬಡಿಗೇರ, ಮಂಜು ಹಳ್ಳಿಕೇರಿ, ರಾಶೀದ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.ಭರವಸೆ: ಶೌಚಾಲಯ ನಿರ್ಮಾಣಕ್ಕೆ ಯಾವುದೇ ರೀತಿಯ ಪರವಾನಗಿ ನೀಡಿಲ್ಲ, ಕಾಲೇಜು ಅಭಿವೃದ್ಧಿ ಸಮಿತಿ ಮುಖ್ಯಸ್ಥರನ್ನು ಕರೆಸಿ ವಿಚಾರಿಸಿ, ವಾಸ್ತವಾಂಶವನ್ನು ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು.

ಈ ಕುರಿತು ನ್ಯಾಯ ಸಮ್ಮತ ನಿರ್ಣಯ ಕೈಗೊಳ್ಳುವುದಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ವೆಂಕಟೇಶ ಭರವಸೆ ನೀಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry