ಕಾಲೇಜು ಮಾನ್ಯತೆ ನವೀಕರಣ- ಸೂಚನೆ

7

ಕಾಲೇಜು ಮಾನ್ಯತೆ ನವೀಕರಣ- ಸೂಚನೆ

Published:
Updated:

ಬೆಂಗಳೂರು: ರಾಜ್ಯದಲ್ಲಿನ ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಪದವಿ ಪೂರ್ವ ಕಾಲೇಜುಗಳು ಮಾನ್ಯತೆಯನ್ನು ನವೀಕರಿಸಿಕೊಳ್ಳಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚಿಸಿದೆ.ಈ ಹಿಂದೆ 2006ರಲ್ಲಿ ಕಾಲೇಜುಗಳ ಮಾನ್ಯತೆಯನ್ನು 5 ವರ್ಷಗಳ ಅವಧಿಗೆ ನವೀಕರಿಸಲಾಗಿತ್ತು. 2010-11ಕ್ಕೆ ಆ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈಗ ಮಾನ್ಯತೆಯನ್ನು ನವೀಕರಿಸಿಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.ಮಾನ್ಯತೆ ನವೀಕರಣದ ಅರ್ಜಿ ನಮೂನೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ಕಾಲೇಜಿನವರು ಅದನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಇದೇ 16ರ ಒಳಗೆ ಜಿಲ್ಲಾ ಉಪ ನಿರ್ದೇಶಕರಿಗೆ ಸಲ್ಲಿಸುವಂತೆ ಆಯುಕ್ತರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry