ನವದೆಹಲಿ (ಪಿಟಿಐ): ಗಂಗಾ ನದಿ ರಕ್ಷಣೆಗೆ ಸಮಯ ಮೀರುತ್ತಿದೆ ಎಂದು ಎಚ್ಚರಿಕೆ ನೀಡಿರುವ ಪ್ರಧಾನಿ ಮನಮೋಹನ್ ಸಿಂಗ್, ಕೊಳಚೆ ನೀರು ಸಂಸ್ಕರ ಣೆಯಲ್ಲಿ ರಾಜ್ಯ ಸರ್ಕಾರಗಳ ವಿಳಂಬ ಧೋರಣೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನದಿ ನೀರನ್ನು ಮಲೀನಗೊಳಿಸುವ ಕೈಗಾರಿಕೆಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ತಾಕೀತು ಮಾಡಿದ್ದಾರೆ.

ಗಂಗಾ ನದಿಗೆ ನಿತ್ಯವೂ 2,900 ದಶಲಕ್ಷ ಲೀಟರ್ ಕೊಳಚೆ ನೀರು ಹರಿದು ಬರುತ್ತಿರುವುದಕ್ಕೆ ಆತಂಕ ವ್ಯಕ್ತಪಡಿಸಿದ ಪ್ರಧಾನಿ, ನೂತನ ತ್ಯಾಜ್ಯ ಸಂಸ್ಕರಣೆಗೆ ಪ್ರಸ್ತಾವ ಕಳುಹಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಿದರು. ಯೋಜನೆ ಕೈಗೆತ್ತಿಕೊಳ್ಳಲು ಅಗತ್ಯ ಬಂಡವಾಳ ಲಭ್ಯವಿದೆ ಎಂದು ಸ್ಪಷ್ಟಪಡಿ ಸಿದರು.

ಮಂಗಳವಾರ ರಾಷ್ಟ್ರೀಯ ಗಂಗಾ ನದಿ ಪಾತ್ರ ಪ್ರಾಧಿ ಕಾರದ ಮೂರನೇ ಸಭೆಯಲ್ಲಿ ಮಾತನಾಡಿದ ಅವರು, ನಿಯಮ ಉಲ್ಲಂಘಿಸುವ ಕೈಗಾರಿಕೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.