ಕಾಳಸಂತೆಯಲ್ಲಿ ಟಿಕೆಟ್ ಮಾರಾಟ; 25 ಜನರ ಬಂಧನ

7

ಕಾಳಸಂತೆಯಲ್ಲಿ ಟಿಕೆಟ್ ಮಾರಾಟ; 25 ಜನರ ಬಂಧನ

Published:
Updated:

ಬೆಂಗಳೂರು: ಭಾರತ ಮತ್ತು ಇಂಗ್ಲೆಂಡ್ ಪಂದ್ಯದ ಟಿಕೆಟ್‌ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ 25 ಮಂದಿಯನ್ನು ಬಂಧಿಸಿರುವ ನಗರ ಪೊಲೀಸರು 82 ಸಾವಿರ ನಗದು ಮತ್ತು 25 ಟಿಕೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಭಾನುವಾರ ಬೆಳಿಗ್ಗೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಕ್ರೀಡಾಭಿಮಾನಿಗಳಿಗೆ ಹೆಚ್ಚಿನ ಬೆಲೆಗೆ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದು ಅವರನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.ಆರೋಪಿಗಳು 1,600 ರೂಪಾಯಿ ಬೆಲೆಯ ಟಿಕೆಟ್ ಅನ್ನು ಎಂಟರಿಂದ ಹತ್ತು ಸಾವಿರ ರೂಪಾಯಿಗೆ ಮಾರಾಟ ಮಾಡುತ್ತಿದ್ದರು. ಅವರ ಜತೆ ಇದ್ದ ಮತ್ತಷ್ಟು ಆರೋಪಿಗಳು ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಬಂಧಿತರಿಂದ ಮೊಬೈಲ್ ಫೋನ್‌ಗಳು ಹಾಗೂ ಖರೀದಿಯಾಗದೆ ಉಳಿದಿದ್ದ ಟಿಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ಕಬ್ಬನ್‌ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry