ಗುರುವಾರ , ಜೂನ್ 24, 2021
29 °C

ಕಾಳ್ಗಿಚ್ಚು ನಂದಿಸಲು ಹೆಲಿಕಾಪ್ಟರ್ ಬಳಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್‌:  ಇಲ್ಲಿನ ತಿರುಪತಿ ತಿರುಮಲ ದೇವಸ್ಥಾನ ಸುತ್ತಲಿನ ಪ್ರದೇಶಕ್ಕೆ ವ್ಯಾಪಿಸಿ ಆತಂಕ ಉಂಟುಮಾಡಿರುವ ಕಾಳ್ಗಿಚ್ಚು ನಂದಿಸಲು ಗುರುವಾರ ಭಾರತೀಯ ವಾಯುಪಡೆಯ ನಾಲ್ಕು ಹೆಲಿಕಾಪ್ಟರ್‌­ಗಳನ್ನು ನಿಯೋಜಿಸಲಾಗಿದೆ.

4000 ಲೀಟರ್‍ ಸಾಮರ್ಥ್ಯವುಳ್ಳ ಎಂಐ-17 ವಿ5 ಎರಡು ಹೆಲಿಕಾಪ್ಟರ್‌ಗಳು ಸೇರಿದಂತೆ ಒಟ್ಟು ನಾಲ್ಕು ಹೆಲಿಕಾಪ್ಟರ್‌ಗಳನ್ನು ತಿರುಪತಿ ದೇವಸ್ಥಾನದ ಸುತ್ತಲಿನ ಪ್ರದೇಶದಲ್ಲಿ ಕಾಣಿಸಿಕೊಂಡಿರುವ ಬೆಂಕಿ ನಂದಿಸುವ ಕಾರ್ಯಕ್ಕೆ ನಿಯೋಜಿಸಲಾಗಿದೆ ಎಂದು ರಕ್ಷಣಾ ಇಲಾಖೆಯ ಮೂಲಗಳು ತಿಳಿಸಿವೆ.

ರಕ್ಷಣಾ ಇಲಾಖೆಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ ಸೇರಿದಂತೆ 150 ಯೋಧರನ್ನು ಈ ವಿಪತ್ತು ನಿ‍ರ್ವಹಿಸುವ ಕಾರ್ಯಕ್ಕಾಗಿ ನಿಯೋಜಿಸಲಾಗಿದೆ ಎಂದು ಮೂಲಗಳು ಹೇಳಿವೆ.

ಬೆಂಕಿ ಆರಿಸಲು ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಹಾಗೂ  ಅಗ್ನಿಶಾಮಕ ದಳದ ಸಿಬ್ಬಂದಿ ಬುಧವಾರವಿಡೀ ಬೆಂಕಿ ಆರಿಸುವ ಪ್ರಯತ್ನ ಮಾಡಿದರು. ತಿರುಮಲ ಬೆಟ್ಟದಲ್ಲಿ ದಟ್ಟ ಹೊಗೆ ಆವರಿಸಿದ್ದು, ಸುತ್ತಲಿನ ಅಂಗಡಿಗಳು ಹಾಗೂ ದೇವಸ್ಥಾನಕ್ಕೆ ಹೋಗುವ ಮಾರ್ಗ­ವನ್ನು ಮುಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.