ಬೆಂಗಳೂರು: `ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕವನ್ನು ಕೆಣಕಲಿಕ್ಕೆ ತಮಿಳುನಾಡು ಪದೇ ಪದೇ ಕ್ಯಾತೆ ತೆಗೆಯುತ್ತಿದೆ. ಇದಕ್ಕೆ ಅವಕಾಶ ನೀಡದೆ ಕೇಂದ್ರ ಸರ್ಕಾರ ತಕ್ಷಣ ಮಧ್ಯಪ್ರವೇಶ ಮಾಡಬೇಕು~ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಸೋಮವಾರ ವಿಧಾನಸಭೆಯಲ್ಲಿ ಆಗ್ರಹಪಡಿಸಿದರು.

ಫೆಬ್ರುವರಿಯಿಂದ ಮೇ ತಿಂಗಳವರೆಗೆ ಕಾವೇರಿ ನೀರು ಬಳಕೆಗೆ ಕರ್ನಾಟಕಕ್ಕೆ ನಿರ್ಬಂಧ ಹೇರುವಂತೆ ಕೋರಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿದ್ದು, ಈ ಕುರಿತು ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿ ತಾವಾಗಿಯೇ ಹೇಳಿಕೆ ನೀಡಿದರು.

ಮುಖ್ಯಮಂತ್ರಿ ಮಾತನಾಡಿ, `ಕಾವೇರಿ ವಿಷಯದಲ್ಲಿ ತಮಿಳುನಾಡು ಇದುವರೆಗೂ ನಾಲ್ಕೈದು ಮಧ್ಯಂತರ ಅರ್ಜಿಗಳನ್ನು ಸುಪ್ರೀಂಕೋರ್ಟ್ಗೆ ಸಲ್ಲಿಸಿದೆ. ಈಗ ಹೊಸ ವಿಷಯವನ್ನು ಇಟ್ಟುಕೊಂಡು ಮತ್ತೊಂದು ಅರ್ಜಿ ಹಾಕಿದ್ದು, ಅದರ ವಿರುದ್ಧ ಕಾನೂನಾತ್ಮಕ ಹಾಗೂ ರಾಜಕೀಯ ಹೋರಾಟ ನಡೆಸಲಾಗುವುದು~ ಎಂದು ಹೇಳಿದರು.

`ತಮಿಳುನಾಡಿನ ಯಾವ ಒತ್ತಡಕ್ಕೂ ಮಣಿಯುವುದಿಲ್ಲ. ಆ ರಾಜ್ಯ ದೊಡ್ಡದೆಂದು ಅಲ್ಲಿನ ರಾಜಕೀಯ ಪ್ರಭಾವಕ್ಕೆ ಕೇಂದ್ರ ಒಳಗಾಗಬಾರದು. ಪ್ರಚೋದನೆಗೆ ಅವಕಾಶ ನೀಡದೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ನಿಜಾಂಶವನ್ನು ಆ ರಾಜ್ಯಕ್ಕೆ ಮನವರಿಕೆ ಮಾಡಬೇಕು. ಇಲ್ಲದಿದ್ದರೆ ಗೊಂದಲಗಳು ಉಂಟಾಗಿ, ಸಮಸ್ಯೆ ಎದುರಾಗುತ್ತದೆ~ ಎಂದು ಅವರು ಎಚ್ಚರಿಸಿದರು.

ಕಾವೇರಿ ವಿಷಯದಲ್ಲಿ ಇಡೀ ಸದನ ಸರ್ಕಾರದ ಬೆಂಬಲಕ್ಕೆ ನಿಂತಿದ್ದಕ್ಕೆ ಮುಕ್ತಕಂಠದಿಂದ ಶ್ಲಾಘಿಸಿದ ಅವರು, `ಈ ಹಿನ್ನೆಲೆಯಲ್ಲಿ ತಮಿಳುನಾಡಿನ ತೀರ್ಮಾನದ ವಿರುದ್ಧ ನಿರ್ಣಯ ತೆಗೆದುಕೊಳ್ಳುವುದು ಸದ್ಯಕ್ಕೆ ಬೇಡ. ಅಗತ್ಯಬಿದ್ದಾಗ ಸರ್ವಪಕ್ಷಗಳ ಮುಖಂಡರನ್ನು ಕರೆದು ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲಾಗುವುದು. ತಮಿಳುನಾಡಿನ ಬೆದರಿಕೆ ತಂತ್ರಗಳಿಗೆ ಬಗ್ಗುವುದಿಲ್ಲ. ರಾಜ್ಯದ ರೈತರ ಹಿತ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ. ಆ ನಿಟ್ಟಿನಲ್ಲಿ ಕೆಲಸ ನಿರ್ವಹಿಸಲಾಗುವುದು~ ಎಂದು ಹೇಳಿದರು.

`ಯೋಜನಾ ಆಯೋಗ ರಾಷ್ಟ್ರೀಯ ಜಲ ನೀತಿ ರೂಪಿಸುವ ಬಗ್ಗೆ ಚರ್ಚೆ ನಡೆದಿದೆ. 12ನೇ ಪಂಚವಾರ್ಷಿಕ ಯೋಜನೆಯಲ್ಲಿ ಇದನ್ನು ಸೇರಿಸುವ ಬಗ್ಗೆ ಸಮಾಲೋಚನೆಗಳು ನಡೆಯುತ್ತಿವೆ. ಆದರೆ, ಅಂತಹ ನೀತಿ ರೂಪಿಸುವುದಕ್ಕೂ ಮುನ್ನ ರಾಜ್ಯ ಸರ್ಕಾರಗಳ ಜತೆಗೂ ಸಮಾಲೋಚಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಕೋರಲಾಗುವುದು~ ಎಂದರು.

ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿ, `2007ರ ಫೆಬ್ರುವರಿ 5ರ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಪ್ರಕಾರ 192 ಟಿಎಂಸಿ ಅಡಿ ನೀರನ್ನು ತಮಿಳುನಾಡಿಗೆ ಬಿಡಬೇಕಾಗಿದೆ. ಈ ಪ್ರಮಾಣಕ್ಕಿಂತ ಹೆಚ್ಚು ನೀರು 2007ರಿಂದಲೂ ಬಿಡುಗಡೆ ಮಾಡಲಾಗುತ್ತಿದೆ. ತಮಿಳುನಾಡಿನ ತಗಾದೆಗೆ ಸೂಕ್ತ ಪ್ರತ್ಯುತ್ತರ ನೀಡಲಾಗುವುದು. ವಕೀಲರ ಜತೆ ಚರ್ಚಿಸಿ ಕೋರ್ಟಿಗೆ ವಿವರಿಸಲಾಗುವುದು~ ಎಂದರು.

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, `ಕಾವೇರಿ ವಿಚಾರದಲ್ಲಿ ತಮಿಳುನಾಡು ಎಂದೂ ನ್ಯಾಯಯುತವಾಗಿ ನಡೆದುಕೊಂಡಿಲ್ಲ. ಹೆಚ್ಚು ಲಾಭ ಪಡೆಯುವ ತಮಿಳುನಾಡೇ ಯಾವಾಗಲೂ ಹೆಚ್ಚು ಗಲಾಟೆ ಮಾಡುತ್ತದೆ. ಇಂತಹ ಯಾವ ದಬ್ಬಾಳಿಕೆಗೂ ಕರ್ನಾಟಕ ಹೆದರುವುದಿಲ್ಲ ಎಂಬ ಸಂದೇಶ ಕರ್ನಾಟಕದಿಂದ ಹೋಗಬೇಕಾಗಿದೆ. ರೈತರ ಹಿತ ಕಾಯಲು ಸರ್ಕಾರ ತೆಗೆದುಕೊಳ್ಳುವ ಎಲ್ಲ ತೀರ್ಮಾನಗಳಿಗೂ ನಮ್ಮ ಬೆಂಬಲ ಇದೆ~ ಎಂದು ಹೇಳಿದರು.

`ನಮ್ಮ ನೀರು ನಾವು ಬಳಸಲು ನಿರ್ಬಂಧ ಏಕೆ? ನಮ್ಮಲ್ಲಿ ಜಲಾಶಯ ಕಟ್ಟಿಕೊಂಡು ನಾವೇ ನೀರು ಬಳಸುವಂತಿಲ್ಲ ಅಂದರೆ ಏನರ್ಥ? ನಾವೇನು ತಮಿಳುನಾಡು ಸರ್ಕಾರದ ಅಧೀನದಲ್ಲಿದ್ದೇವೆಯೇ~ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. `ಒಕ್ಕೂಟ ವ್ಯವಸ್ಥೆಯನ್ನು ಅರ್ಥ ಮಾಡಿಕೊಂಡು ತಮಿಳುನಾಡು ಮುಖ್ಯಮಂತ್ರಿ ಕೆಲಸ ನಿರ್ವಹಿಸಬೇಕು~ ಎಂದೂ ತಾಕೀತು ಮಾಡಿದರು.

ಪಕ್ಷೇತರ ಸದಸ್ಯ ಪಿ.ಎಂ.ನರೇಂದ್ರಸ್ವಾಮಿ ಮಾತನಾಡಿ, `ನನ್ನ ಕ್ಷೇತ್ರವಾದ ಮಳವಳ್ಳಿಯಲ್ಲೇ ಕಾವೇರಿ ನದಿ ಹರಿದರೂ ಅಲ್ಲಿ ಕುಡಿಯುವ ನೀರಿನ ಸಮಸ್ಯೆ ಇವತ್ತಿಗೂ ಈಡೇರಿಲ್ಲ. ದೀಪದ ಕೆಳಗೆ ಕತ್ತಲೆ ಎನ್ನುವಂತೆ ನದಿ ತೀರದ ಗ್ರಾಮಗಳಲ್ಲೇ ಕುಡಿಯುವ ನೀರಿನ ಸಮಸ್ಯೆ ಇದೆ. ಮೊದಲು ಅದನ್ನು ಬಗೆಹರಿಸಿ, ನಂತರ ತಮಿಳುನಾಡಿಗೆ ನೀರು ಕೊಡಿ~ ಎಂದು ಆಗ್ರಹಿಸಿದರು.

ಕಾಂಗ್ರೆಸ್ನ ಟಿ.ಬಿ.ಜಯಚಂದ್ರ, ವಿ.ಶ್ರೀನಿವಾಸ ಪ್ರಸಾದ್, ಡಿ.ಕೆ.ಶಿವಕುಮಾರ್, ಡಾ.ಎಚ್.ಸಿ.ಮಹದೇವಪ್ಪ ಅವರೂ ಕಾವೇರಿ ವಿಚಾರದಲ್ಲಿ ರೈತರ ಹಿತ ಬಲಿಕೊಡಬಾರದು ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.