ಕಾವೇರಿ ಜಲಾನಯನದಲ್ಲಿ ಮಳೆ ಕೊರತೆ: ಇಂದು ಸಭೆ

ಬೆಂಗಳೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆಯಿಂದಾಗಿ ಕೈಗೊಳ್ಳಬೇಕಾದ ಕ್ರಮಗಳನ್ನು ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಸಂಜೆ ಸಭೆ ಕರೆದಿದ್ದಾರೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಈ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಅಣೆಕಟ್ಟಿನಲ್ಲಿ ನೀರಿಲ್ಲ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡಲೇಬೇಕಾದ ಸಂಕಷ್ಟ ಎದುರಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು ಎನ್ನಲಾಗಿದೆ.
ಕರ್ನಾಟಕ ನೀರು ಬಿಡದೆ ಇದ್ದುದರಿಂದ 2012–13ರಲ್ಲಿ ₹2,500 ಕೋಟಿ ಮೌಲ್ಯದ ಬೆಳೆನಷ್ಟವಾಗಿದ್ದು, ಇದನ್ನು ಕರ್ನಾಟಕ ತುಂಬಿಕೊಡಬೇಕು ಎಂದು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಕೋರ್ಟ್ನಲ್ಲಿ ಈ ಅರ್ಜಿ ವಿಚಾರಣೆಗೆ ಬರಲಿದ್ದು, ಅದನ್ನು ಎದುರಿಸುವ ಬಗ್ಗೆ ಸಭೆಯಲ್ಲಿ ಸಮಾಲೋಚನೆ ನಡೆಯಲಿದೆ ಎನ್ನಲಾಗಿದೆ.
ಕೆಆರ್ಎಸ್ ಜಲಾಶಯದಲ್ಲಿ ಪ್ರಸ್ತುತ 20 ಟಿಎಂಸಿ ಅಡಿ ನೀರಿದ್ದು, ಬೆಂಗಳೂರಿನ ಕುಡಿಯುವ ನೀರಿನ ಬೇಡಿಕೆ ಪೂರೈಸಲು ಮಾತ್ರ ಸಾಕಾಗಲಿದೆ. ಉಳಿದ ನಗರಗಳಿಗೆ ಪೂರೈಸಲು ಬೇಕಾದ ನೀರಿನ ಕೊರತೆ ಎದುರಾಗಿದೆ. ಈ ಕಾರಣದಿಂದ ಕೃಷಿಗೆ ನೀರು ಹಾಯಿಸುವ ಪರಿಸ್ಥಿತಿ ಇಲ್ಲ. ಸಂಭಾವ್ಯ ಬಿಕ್ಕಟ್ಟನ್ನು ಬಗೆಹರಿಸುವ ಬಗ್ಗೆ ಚರ್ಚೆ ನಡೆಯಲಿದೆ ಎಂದು ಗೊತ್ತಾಗಿದೆ.
ಕಾವೇರಿ ಜಲಾಶಯದಿಂದ ಕೃಷಿಗೆ ನೀರು ಬಿಡುಗಡೆ ಮಾಡುವುದಿಲ್ಲ, ಕುಡಿಯುವ ಉದ್ದೇಶಕ್ಕಾಗಿ ಮಾತ್ರ ನೀರು ಬಿಡುವುದಾಗಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.