ಕಾವೇರಿ ತೀರ್ಪಿನ ಅಧಿಸೂಚನೆ ಹೊರಡಿಸಿ: ಕೇಂದ್ರಕ್ಕೆ ಸುಪ್ರೀಂ ಸೂಚನೆ

7

ಕಾವೇರಿ ತೀರ್ಪಿನ ಅಧಿಸೂಚನೆ ಹೊರಡಿಸಿ: ಕೇಂದ್ರಕ್ಕೆ ಸುಪ್ರೀಂ ಸೂಚನೆ

Published:
Updated:
ಕಾವೇರಿ ತೀರ್ಪಿನ ಅಧಿಸೂಚನೆ ಹೊರಡಿಸಿ: ಕೇಂದ್ರಕ್ಕೆ ಸುಪ್ರೀಂ ಸೂಚನೆ

ನವದೆಹಲಿ (ಪಿಟಿಐ): ಕಾವೇರಿ ನ್ಯಾಯಮಂಡಳಿ ತೀರ್ಪಿನ ಅಧಿಸೂಚನೆಯನ್ನು ಇದೇ 20ರೊಳಗೆ ಹೊರಡಿಸುವಂತೆ ಸೋಮವಾರ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ರಾಜ್ಯ ಸರ್ಕಾರ ಕಾವೇರಿ ನ್ಯಾಯಾಧೀಕರಣದ ತೀರ್ಪಿನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿರುವುದರ ಬಗ್ಗೆ ಕೇಂದ್ರದ ಗಮನ ಸೆಳೆಯಲಾಗಿತ್ತು. ಈಗ ತೀರ್ಪಿನ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ಕೋರ್ಟ್ ಸೂಚಿಸಿರುವುದರಿಂದ ಮತ್ತೆ ಕಾವೇರಿ ವಿವಾದ ಕಾವೇರಲಿದೆ.

ಇದೇ ಸಂದರ್ಭದಲ್ಲಿ ಮೂವರು ಸದಸ್ಯರ ನಿಯೋಗವನ್ನು ರಚಿಸಿ ಕಾವೇರಿ ನದಿ ಮುಖಜ ಪ್ರದೇಶಕ್ಕೆ ಭೇಟಿ ನೀಡಿ ವರದಿ ತರಿಸುವಂತೆ ಕೇಂದ್ರ ಜಲ ಆಯೋಗಕ್ಕೆ ಕೋರ್ಟ್ ಸೂಚಿಸಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry